Published On: Mon, Mar 9th, 2020

ಮಾರ್ಗನ್ಸ್ ಗೇಟ್ : ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ

ಉಳ್ಳಾಲ: ರೈಲ್ವೇ ಹಳಿಯಲ್ಲಿ ಯುವಕನ ಶವ ಎರಡು ಕಾಲುಗಳು ಬೇರ್ಪಟ್ಟ ಸ್ಥಿತಿಯಲ್ಲಿ ಮಾರ್ಗನ್ಸ್ ಗೇಟ್ ಎರಡನೇ ಬ್ರಿಡ್ಜ್ ನಡಿ ಭಾನುವಾರ ತಡರಾತ್ರಿ 1.30 ಸುಮಾರಿಗೆ ಬೆಳಕಿಗೆ ಬಂದಿದೆ.ಸುಮಾರು 30-35 ವರ್ಷ ಒಳಗಿನ ಯುವಕನ ಮೃತದೇಹ ಇದಾಗಿದೆ. ಸಮೀಪದಲ್ಲೇ ಬ್ಯಾಗ್ ಹಾಗೂ ಅದರೊಳಗೆ ಬಿಸ್ಲರಿ ಬಾಟಲ್ ನಲ್ಲಿ ಮದ್ಯ ಪತ್ತೆಯಾಗಿದೆ.

f712c025-ad9f-4796-8fee-321476d4b677 ಧರಿಸಿದ್ದ ಪ್ಯಾಂಟಿನ ಕಿಸೆಯಲ್ಲಿ ತ್ರಿಶ್ಶೂರಿನ ಬ್ಯಾಂಕೊಂದರಲ್ಲಿ ಹಣ ಪಾವತಿಸಿದ ರಶೀದಿಯೊಂದು ಪತ್ತೆಯಾಗಿದೆ.ಪಸ್ ೯ ನಲ್ಲಿ ಚಿಲ್ಲರೆ ಹಣ ಬಿಟ್ಟರೆ ಮೊಬೈಲ್ ಕೂಡಾ ಇರಲಿಲ್ಲ. ಕೇರಳದಿಂದ ಬರುವ ರೈಲಿನಿಂದ ಯುವಕ ಬಿದ್ದು ಮೃತಪಟ್ಟಿರುವ ಸಾಧ್ಯತೆಗಳೂ ಇವೆ. ಅಥವಾ ರೈಲು ಹಳಿಯಲ್ಲಿ ನಡೆದುಕೊಂಡು ಬಂದು ಆತ್ಮಹತ್ಯೆ ನಡೆಸಿರುವ ಶಂಕೆಯೂ ಇದೆ. ತಡರಾತ್ರಿ ವೇಳೆ ಗಣೇಶ್ ಆಂಬ್ಯುಲೆನ್ಸ್ ನ ಗಣೇಶ್ ಇವರು ಸಹಾಯಕ ಜತೆಗೆ 2.00 ವರೆಗೂ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೇ ವೇಳೆ ಮಂಗಳೂರು ರೈಲ್ವೇ ಪೊಲೀಸರು ಸಾಥ್ ನೀಡಿದರು. ಸಂಬಂಧಿಕರು ಇದ್ದಲ್ಲಿ ಮಂಗಳೂರು ರೈಲ್ವೇ ಪೊಲೀಸರನ್ನು ಸಂಪರ್ಕಿಸಲು ಕೋರಲಾಗಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter