ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
ಬಂಟ್ವಾಳ : ಪಾಣೆಮಂಗಳೂರು ನೂತನ ಸೇತುವೆ ಬಳಿಯಿಂದ ಶನಿವಾರ ಮುಂಜಾನೆಯಿಂದ ನಾಪತ್ತೆಯಾಗಿದ್ದ ಮಹಿಳೆಯ ಶವ ತುಂಬೆ ವೆಂಟೆಡ್ ಡ್ಯಾಂ ಸಮೀಪ ನೇತ್ರಾವತಿ ನದಿಯಲ್ಲಿ ಸೋಮವಾರ ಪತ್ತೆಯಾಗಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ನಿವಾಸಿ ಗೋಪಿ ಪೂಜಾರ್ತಿ (೪೯) ನೇತ್ರಾವತಿ ನದಿಗೆಹಾರಿ ಆತ್ಮಹತ್ಯೆ ಮಾಡಿಕೊಂಡವರು.
ಬಿ.ಸಿ.ರೋಡಿನ ಚಿಕಯ್ಯಮಠಕ್ಕೆ ಬಂದಿದ್ದ ಅವರು ಜು.೧೧ರಂದು ಮುಂಜಾನೆ ನಾಪತ್ತೆಯಾಗಿದ್ದು, ಪಾಣೆಮಂಗಳೂರು ನೂತನ ಸೇತುವೆಯ ಮೇಲೆ ಗೋಪಿ ಪೂಜಾರ್ತಿ ಬಳಸುತ್ತಿದ್ದ ಶಾಲು ಹಾಗೂ ಕೈಯಲ್ಲಿದ್ದ ಬಳೆ ಕಂಡುಬಂದಿತ್ತು. ಹಾಗಾಗಿ ಅವರು ನೇತ್ರಾವತಿ ಸೇತುವೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಇದೀಗ ಅವರ ಮೃತದೇಹ ಪತ್ತೆಯಾಗಿದ್ದು,ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.