Published On: Mon, Aug 3rd, 2020

ಗ್ರ‍್ರಾಮೀಣ ನೀರು ನೈರ್ಮಲ್ಯ ಸಪ್ತಾಹ ಆಚರಣೆ ಹಾಗೂ ವಸ್ತು ಪ್ರದರ್ಶನ ಉದ್ಘಾಟನೆ

ಮಂಗಳೂರು: ಕರ್ನಾಟಕ ಸರಕಾರದ ಕುಡಿಯುವ ನೀರು ಮತ್ತು ನೈರ್ಮಲ್ಯ ಕುರಿತು ಇಲಾಖೆ ಕಳೆದ ಒಂದು ವರ್ಷದ ಅವಧಿಯಲ್ಲಿ ಕಾರ್ಯಗತಗೊಳಿಸಿರುವ ಪ್ರಗತಿ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಿ ಇಲಾಖೆಯು ಒದಗಿಸುತ್ತಿರುವ ವಿವಿಧ ಸೌಲಭ್ಯಗಳನ್ನು ಸದುಪಯೊಗ ಪಡಿಸಿಕೊಳ್ಳುವ ಹಾಗೂ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ದಿನಾಂಕ;30.7.2020 ರಿಂದ 5.08.2020 ರವರೆಗೆ “ಗ್ರಾಮೀಣ ನೀರು ನೈರ್ಮಲ್ಯ ಸಪ್ತಾಹ” ಕಾರ್ಯಕ್ರಮವನ್ನು ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಆಚರಿಸಲು ನಿರ್ಧರಿಸಿದೆ.dd032e7b-dc16-48e9-bfa5-15cfb0866559

 

ಇದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ದಿನಾಂಕ:03.08.2020 ಸೋಮವಾರದಂದು ಅಪರಾಹ್ನ 2.30 ಗಂಟೆಗೆ ಗ್ರ‍್ರಾಮೀಣ ನೀರು ನೈರ್ಮಲ್ಯ ಸಪ್ತಾಹ ಆಚರಣೆ ಹಾಗೂ ವಸ್ತುಪ್ರದರ್ಶನ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮಾನ್ಯ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಭಾಗವಹಿಸಲಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter