Published On: Fri, Aug 14th, 2020

*ಭಾರತ ಮತ್ತೆ ಎದ್ದು ನಿಲ್ಲಲು ಸ್ವಾತಂತ್ರ್ಯ ದಿನ ದಾರಿ ದೀಪವಾಗಲಿ* 

ಬ್ರಿಟೀಷರ ಆಡಳಿತದಿಂದ ಭಾರತ  ಸ್ವತಂತ್ರವಾದ ದಿನವನ್ನು ನಾವೆಲ್ಲರೂ ಪ್ರತಿ ವರ್ಷ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾ 1ಗಿ ಆಚರಿಸಲಾಗುತ್ತದೆ.  ಎಲ್ಲಾ ಕಡೆಗಳಲ್ಲಿ  ತ್ರಿವರ್ಣ ಧ್ವಜವನ್ನು ಹಾರಿಸಿ ಸಿಹಿ ಹಂಚಲಾಗುತ್ತದೆ. ಈ ಆಚರಣೆಯ ಪ್ರಮುಖ ಸಮಾರಂಭ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯತ್ತದೆ. ಈ ಸಮಾರಂಭದಲ್ಲಿ, ಭಾರತದ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಧ್ವಜವನ್ನು ಹಾರಿಸಿ ಭಾರತದ ರಾಷ್ಟ್ರಗೀತೆ “ಜನ ಗಣ ಮನ”ವನ್ನು ಹಾಡಿ ನಂತರ ರಾಷ್ಟ್ರವನ್ನು ಉದ್ದೇಶಿಸಿ ಭಾಷಣದಲ್ಲಿ ದೇಶದ ಸಾಧನೆ, ದೇಶದ ಮುಂದಿರುವ ಪ್ರಮುಖ ಸವಾಲುಗಳ ಬಗ್ಗೆ ಮಾತನಾಡಿ, ಕೆಲವು ಪ್ರಗತಿ ಯೋಜನೆಗಳನ್ನು ಪ್ರಕಟಿಸಲಾಗುತ್ತದೆ. ಈ ದಿನದಂದು ದೇಶದ ಸ್ವಾತ್ರಂತ್ರ್ಯಕ್ಕೆ ಮಡಿದ ನಾಯಕರನ್ನು ಸ್ಮರಿಸಲಾಗುತ್ತದೆ. ಅವರೆಲ್ಲರ ತ್ಯಾಗ ಮತ್ತು ಬಲಿದಾನದ ಮೂಲಕ ನಾವೆಲ್ಲರೂ ಇಂದು ಖುಷಿಯಾಗಿ ಜೀವಿಸುತ್ತಿದ್ದೇವೆ.IMG-20200813-WA0019
ದೇಶದ ಪ್ರಥಮ ಪ್ರಧಾನಿ ಜವಾಹರ್ ‌ಲಾಲ್ ನೆಹರು ರವರ ಟ್ರಿಸ್ಟ್ ವಿಥ್ ಡೆಸ್ಟಿನಿ ಭಾಷಣ:
ಜೂನ್ 3,1947 ರಂದು ಅಂದಿನ ಗವರ್ನರ್ ಜನರಲ್ ಆಗಿದ್ದ ಲಾರ್ಡ್ ಮೌಂಟ್‌ಬ್ಯಾಟನ್, ಬ್ರಿಟಿ‍ಷ್ ಭಾರತ ಸಾಮ್ರಾಜ್ಯವನ್ನು ಭಾರತ ಮತ್ತು ಪಾಕಿಸ್ತಾನ ಎಂಬ ಎರಡು ರಾಷ್ಟ್ರಗಳಾಗಿ ವಿಭಜಿಸುವುದಾಗಿ ಘೋಷಿಸಿದನು. ಇದರ ನಂತರ ಭಾರತದ ಸ್ವಾತ್ರಂತ್ರ್ಯ ಕಾಯಿದೆ 1947 ರ ಅನ್ವಯ ಆಗಸ್ಟ್ 15, 1947 ರಂದು ಭಾರತವನ್ನು ಸ್ವತಂತ್ರ ರಾಷ್ಟ್ರವನ್ನಾಗಿ ಘೋಷಿಸಲಾಯಿತು. ಅಂದಿನ ಮದ್ಯರಾತ್ರಿ,  ನೆಹರು ರವರು ದೇಶದ ಪ್ರಥಮ ಪ್ರಧಾನ ಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಂದು ಅವರು ರಾಷ್ಟ್ರವನ್ನುದ್ದೇಶಿಸಿ, ಟ್ರಿಸ್ಟ್ ವಿಥ್ ಡೆಸ್ಟಿನಿ ಭಾಷಣ ( ‘ಭಾಗ್ಯದೊಡನೆ ಒಪ್ಪಂದ’ ಭಾಷಣ) ಮಾಡಿದರು.
   ನಮ್ಮ ದೇಶದ ಸ್ವಾತಂತ್ರ್ಯ ದಿನಾಚರಣೆ ಮಧ್ಯರಾತ್ರಿಯ ಗಂಟೆ ಹೊಡೆಯುತ್ತಿದ್ದಂತೆ ಜಗತ್ತು ಮಲಗಿರುವಾಗ ಭಾರತವು ಚಲನಶೀಲತೆ ಮತ್ತು ಸ್ವಾತಂತ್ರ್ಯಕ್ಕೆ ಎಚ್ಚರಗೊಳ್ಳುತ್ತದೆ. ಇತಿಹಾಸದಲ್ಲಿ ಬಹಳ ಅಪರೂಪವಾಗಿ ಬರುವ ಇಂಥ ಈ ಗಳಿಗೆಯಲ್ಲಿ ಹಳತಿನಿಂದ ಹೊಸತಿಗೆ ಕಾಲಿಡುತ್ತಿದ್ದೇವೆ . ಹಳೆಯ ಯುಗ ಮುಗಿದು ಬಹುಕಾಲ ಅದುಮಿಟ್ಟ ದೇಶವೊಂದರ ಚೇತನವು ತನ್ನ ಅಭಿವ್ಯಕ್ತಿಯನ್ನು ಕಂಡುಕೊಳ್ಳುತ್ತಿದೆ….. ಇವತ್ತು ನಾವು ನಮ್ಮ ದುರಾದೃಷ್ಟದ ಕಾಲವನ್ನು ಮುಗಿಸುತ್ತಿದ್ದೇವೆ ಮತ್ತು ಭಾರತವು ತನ್ನನ್ನು ತಾನು ಮತ್ತೆ ಹೊಸತನ ಕಂಡುಕೊಳ್ಳುತ್ತಿದೆ .
   ಭಾರತದ ಸ್ವಾತಂತ್ರ್ಯ ದಿನಾಚರಣೆ:
ಪ್ರಧಾನಮಂತ್ರಿ ನೆಹರು ಮತ್ತು ಉಪಪ್ರಧಾನಮಂತ್ರಿ ಸರ್ದಾರ್ ವಲ್ಲಭಭಾಯ್ ಪಟೇಲ್ ರು ಲಾರ್ಡ್ ಮೌಂಟ್ ಬ್ಯಾಟನ್ನರನ್ನು ಭಾರತದ ಗವರ್ನರ್ ಜನರಲ್ ಆಗಿ ಮುಂದುವರೆಯಲು ಕೋರಿದರು. ಆದರೆ ಜೂನ್ 1948 ರಲ್ಲಿ ಅವರ ಸ್ಥಾನಕ್ಕೆ ಚಕ್ರವರ್ತಿ ರಾಜಗೋಪಾಲಾಚಾರಿ ಅಧಿಕಾರ ಸ್ವೀಕರಿಸಿದರು. ಪಟೇಲರು 565 ರಾಜಸಂಸ್ಥಾನಗಳ ಭಾರತದ ರಾಜಕೀಯ ಏಕೀಕರಣ ದ ಜವಾಬ್ದಾರಿಯನ್ನು ವಹಿಸಿಕೊಂಡರು, ನಂತರ ಕಾಯ೯ ಪ್ರವೃತ್ತರಾದ ಅವರು ಜುನಾಗಢ, ಜಮ್ಮು ಮತ್ತು ಕಾಶ್ಮೀರ, ಮತ್ತು ಹೈದರಾಬಾದ್ ಸಂಸ್ಥಾನ ಗಳನ್ನು ಭಾರತಕ್ಕೆ ಸೇರ್ಪಡೆ ಮಾಡುವಲ್ಲಿ ಸೈನಿಕ ಬಲವನ್ನು ಉಪಯೋಗಿಸಿ “ರೇಷ್ಮೆ ಕೈಗವಸಿನಲ್ಲಿ ಉಕ್ಕಿನ ಮುಷ್ಠಿ” ತಂತ್ರವನ್ನು ಉಪಯೋಗಿಸಿದರು.ಈ ಮೂಲಕ ಭಾರತದ ಏಕೀಕರಣದ ಯುಗ ಪುರುಷರಾದರು.ನಂತರ ಭಾರತವು ಸಂವಿಧಾನ ರಚನೆ ಮಾಡುವ ಸಲುವಾಗಿ,
ಸಂವಿಧಾನ ರಚನಾಸಭೆಯು ಸಂವಿಧಾನದ ಕರಡು ಸಭೆಯನ್ನು 26 ನವೆಂಬರ್ 1949; ರಂದು ಸಿದ್ಧಗೊಳಿಸುವ ಕಾರ್ಯವನ್ನು ಸಂಪೂರ್ಣಗೊಳಿಸಿತು . 26 ಜನವರಿ 1950 ರಂದು ಭಾರತೀಯ ಗಣರಾಜ್ಯ ವನ್ನು ಅಧಿಕೃತವಾಗಿ ಘೋಷಿಸಲಾಯಿತು. ಸಂವಿಧಾನ ರಚನಾಸಭೆಯು ಡಾ. ರಾಜೇಂದ್ರಪ್ರಸಾದರನ್ನು ದೇಶದ ಪ್ರಥಮ ರಾಷ್ಟ್ರಪತಿ ಯನ್ನಾಗಿ ಚುನಾಯಿಸಿತು . ಅವರು ಗವರ್ನರ್ ಜನರಲ್ ರಾಜಗೋಪಾಲಾಚಾರಿಯವರಿಂದ ಅಧಿಕಾರವನ್ನು ಸ್ವೀಕರಿಸಿದರು .ನಂತರ ಸ್ವತಂತ್ರ ಸಾರ್ವಭೌಮ ಭಾರತವು ಪಟೇಲರ ಸಾಧನೆಯ ಮೂಲಕ ಇನ್ನೆರಡು ಪ್ರದೇಶಗಳನ್ನು ತನ್ನಲ್ಲಿ ಸೇರಿಸಿಕೊಂಡಿತು . ಅವು 1961ರಲ್ಲಿ ಪೋರ್ಚುಗೀಸ್ ನಿಯಂತ್ರಣದಿಂದ ವಿಮೋಚನೆಗೊಳಿಸಿದ ಗೋವಾ ಮತ್ತು ಫ್ರೆಂಚರು 1954ರಲ್ಲಿ ಒಪ್ಪಿಸಿದ ಪಾಂಡಿಚೇರಿ ಯನ್ನು ದೇಶದಲ್ಲಿ ಸೇರಿಸಲಾಯಿತು.
 1952 ರಲ್ಲಿ ಭಾರತವು ತನ್ನ ಮೊದಲ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಿತು . ಶೇ. 62ಕ್ಕೂ ಹೆಚ್ಚು ಮತದಾರರು ಅದರಲ್ಲಿ ಭಾಗವಹಿಸಿದರು. ಅದರಿಂದಾಗಿ ಭಾರತವು ವಾಸ್ತವದಲ್ಲಿ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾಯಿತು.ಈ ಚುನಾವಣೆಯು ದೇಶದ ಇತಿಹಾಸದಲ್ಲಿ ಹೊಸ ಭಾಷ್ಯ ಬರೆಯಲು ನೆರವಾಯಿತು.
 *ಸ್ವಾತಂತ್ರ್ಯ ಪಡೆದ ನಂತರದ ಭಾರತದ ಸ್ಥಿತಿ* 
ಪ್ರಸ್ತುತ ನಾವು ಸ್ವತಂತ್ರ ಭಾರತದಲ್ಲಿ ವಾಸಿಸುತ್ತಿದ್ದೇವೆ. ಇಂದು ನಮ್ಮ ದೇಶದಲ್ಲಿ ನಮಗೆ ಯಾವ ರೀತಿಯ ಚಿತ್ರಣ ಕಾಣಿಸುತ್ತಿದೆ ? ಇಂದು ಎಲ್ಲೆಡೆ ಭಯೋತ್ಪಾದನೆ ಹಬ್ಬಿಕೊಂಡಿದೆ. ಭಾರತದಲ್ಲಿನ ಕಾಶ್ಮೀರ, ಪಂಜಾಬ, ಗುಜಾರಾತ, ಸಿಕ್ಕಿಂ ಮುಂತಾದ ರಾಜ್ಯಗಳ ಮೇಲೆ ಗಡಿಯಲ್ಲಿರುವ ದೇಶಗಳಿಂದ ಆಕ್ರಮಣಗಳಾಗುತ್ತಿವೆ. ಪ್ರತಿದಿನ ಬಹುದೊಡ್ಡ ಪ್ರಮಾಣದಲ್ಲಿ ಅತಿಕ್ರಮಣಕಾರರು ದೇಶದೊಳಗೆ ನುಸುಳಿ ದೊಡ್ಡ ದೊಡ್ಡ ನಗರಗಳಲ್ಲಿ ಬಾಂಬ್ ಸ್ಫೋಟ ನಡೆಸುತ್ತಿದ್ದಾರೆ. ಭಯೋತ್ಪಾದಕರು ನೀಡುತ್ತಿರುವ ಬೆದರಿಕೆಯಿಂದಾಗಿ ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ ಮುಂತಾದ ರಾಷ್ಟ್ರೀಯ ಹಬ್ಬಗಳನ್ನು ಸಹ ಪೊಲೀಸು ಬಂದೋಬಸ್ತಿನಲ್ಲಿ ಆಚರಿಸಬೇಕಾಗುತ್ತದೆ. ಹಾಗಾದರೆ ನಮ್ಮ ಭಾರತ ದೇಶವು ನಿಜವಾದ ಅರ್ಥದಲ್ಲಿ ಸ್ವತಂತ್ರವಾಗಿದೆಯೇನು ? ರಕ್ಷಣೆಯು ನಮಗೆ ಲಭಿಸುತ್ತಿದೆಯೇ?ನಿಮಗೆಲ್ಲ ಏನನಿಸುತ್ತದೆ ?
ಇಲ್ಲವಲ್ಲ ! ಇದಕ್ಕಾಗಿ ನಾವೆಲ್ಲರೂ  ರಾಷ್ಟ್ರಾಭಿಮಾನ  ಬೆಳೆಸುವುದು ಅತ್ಯಗತ್ಯವಾಗಿದೆ. ನಮಗೆ ದೇಶದ ಸಂವಿಧಾನ ಮೊದಲು ಧಮ೯ ನಂತರ ವಾಗಬೇಕಾಗಿದೆ.
 *ಇದಕ್ಕಾಗಿ ನಾವು  ಏನು ಮಾಡಬಹುದು
1 ರಾಷ್ಟ್ರಧ್ವಜದ ಗೌರವವನ್ನು ಕಾಪಾಡೋಣ
ಆಗಸ್ಟ್ 15 ಮತ್ತು ಜನವರಿ 26 ಈ ರಾಷ್ಟ್ರೀಯ ದಿನಗಳಂದು ಚಿಕ್ಕ ಆಕಾರದ ಕಾಗದದ ರಾಷ್ಟ್ರ ಧ್ವಜಗಳನ್ನು ವ್ಯಾಪಕ ಸ್ತರದಲ್ಲಿ ಮಾರಾಟ ಮಾಡುತ್ತಾರೆ. ಚಿಕ್ಕ ಮಕ್ಕಳ ಸಹಿತ ಅನೇಕ ಜನರು ರಾಷ್ಟ್ರಭಕ್ತಿ ಮತ್ತು ಉತ್ಸಾಹವನ್ನು ವ್ಯಕ್ತಪಡಿಸಲು ಈ ರಾಷ್ಟ್ರಧ್ವಜಗಳನ್ನು ಖರೀದಿಸುತ್ತಾರೆ (ಪ್ಯಾಸ್ಟಿಕ್ ನಿಂದ ತಯಾರಿಸಲಾದ) ಮತ್ತು ಅವುಗಳನ್ನು ಹೇಗೇಗೋ ಇಡುತ್ತಾರೆ. ಕೆಲವು ದಿನಗಳ ನಂತರ ಇದೇ ಧ್ವಜಗಳನ್ನು ಹರಿದು ರಸ್ತೆಯ ಮೇಲೆ, ಕಸದ ತೊಟ್ಟಿಯಲ್ಲಿ ಮತ್ತು ಇತರ ಕಡೆಗಳಲ್ಲಿ ಬಿಸಾಡುತ್ತಾರೆ. ಹೀಗೆ ಮಾಡಿ ನಾವು ರಾಷ್ಟ್ರಧ್ವಜವನ್ನು ಅಂದರೆ ರಾಷ್ಟ್ರವನ್ನೇ ಅವಮಾನ ಮಾಡುತ್ತೇವೆ. ಅಲ್ಲದೆ ಕರೋನಾದ ಈ ಸಂದಭ೯ದಲ್ಲಿ ದೇಶದ ಧ್ವಜವನ್ನು ಹೋಲುವ ಮಾಸ್ಕ್ ಹಾಕಲಾಗುತ್ತಿದೆ. ಇದು ಸರಿಯಲ್ಲ ಈ ಬಗ್ಗೆ ಸಕಾ೯ರ ಸ್ಪಷ್ಟವಾದ ನಿಣ೯ ಯ ತೆಗೆದುಕೊಳ್ಳಬೇಕಾದ ಅಗತ್ಯವಿದೆ.
 *ನಮ್ಮ ದೇಶದ ಧ್ವಜ ನಮಗೆ ಪವಿತ್ರವಸ್ತುವಾಗಿದೆ.* 
ನಾವೆಲ್ಲರೂ ನಮ್ಮ ಧ್ವಜದ ಗೌರವವನ್ನು ಕಾಪಾಡಬೇಕು. ಇತರ ಯಾರಾದರೂ ಧ್ವಜದ ಅಪಮಾನ ಮಾಡುತ್ತಿದ್ದಲ್ಲಿ ಅವರಿಗೆಲ್ಲ ನಾವು ತಿಳಿಸಿ ಹೇಳಬೇಕು.ಮತ್ತು ನಮ್ಮ ರಾಷ್ಟ್ರೀಯ ಕರ್ತವ್ಯವನ್ನು ನಿಭಾಯಿಸಬೇಕಾಗಿದೆ. ಆಗಸ್ಟ್ 15ಮತ್ತು ಜನವರಿ 26 ರ ನಂತರ ಇತರೆಡೆಗಳಲ್ಲಿ ಬಿದ್ದಿರುವ ಧ್ವಜಗಳನ್ನು ನಾವು ಎತ್ತಿಡೋಣ. ಇದರ ಕುರಿತು ನಾವು ನಮ್ಮ ಮಿತ್ರರಿಗೂ, ನೆರೆಹೊರೆಯವರಿಗೂ ತಿಳಿಸುವ ಕಾಯ೯ ಮಾಡಬೇಕು ಇದು ಕೂಡ ದೇಶ ಸೇವೆ ಮಾಡಿದ ಹಾಗೆ.
ರಾಷ್ಟ್ರೀಯ ಹಬ್ಬಗಳಂದು ಸ್ವಾತಂತ್ರ್ಯವೀರರು ರಾಷ್ಟ್ರಕ್ಕಾಗಿ ಮಾಡಿದ ತ್ಯಾಗ ಬಲಿದಾನವನ್ನು ನೆನಪಿಸಿಕೊಂಡು ಅವರ ಆದಶ೯ ವನ್ನು ಜೀವನದಲ್ಲಿ ರೂಡಿಸಿಕೊಳ್ಳಲು  ಪ್ರಯತ್ನಿಸೋಣ.
 
 *ವಿದ್ಯಾಥಿ೯ಗಳೇ ನೆನಪಿಡಿ;* 
ಆಗಸ್ಟ್ 15 ರಂದು ಬೆಳಗ್ಗೆ ಧ್ವಜವಂದನೆಗಾಗಿ ನಾವೆಲ್ಲರೂ ಒಟ್ಟಾಗೋಣ ( ಕರೋನಾದ ನಿಯಮ ಪಾಲಿಸಿ) ವಿದ್ಯಾಥಿ೯ಗಳು ಧ್ವಜವಂದನೆಯಾದ ಬಳಿಕ ಶಾಲೆಗೆ ರಜೆ ಇರುವುದು ಎಲ್ಲರಿಗೂ ಗೊತ್ತಿರುವುದರಿಂದ ಹೆಚ್ಚಿನ ಮಕ್ಕಳು ಶಾಲೆಗೆ ಹೋಗದೇ ಮನೆಯಲ್ಲಿಯೇ ತುಂಬಾ ಹೊತ್ತಿನ ತನಕ ಮಲಗುವುದು, ಮನೆಯಲ್ಲಿ ಟಿ.ವಿ ಮೊಬೈಲ್ ನೋಡುತ್ತಾ ಕುಳಿತುಕೊಳ್ಳುವುದು, ಊರಿಗೆ ಹೋಗುವುದು ಇತ್ಯಾದಿಗಳನ್ನು ಮಾಡುತ್ತಿರುತ್ತಾರೆ. ಅದರ ಬದಲು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸ್ವಾತಂತ್ರ್ಯವೀರರನ್ನು ಮತ್ತು ಕ್ರಾಂತಿಕಾರರನ್ನು ನೆನಪಿಸಿಕೊಂಡು ಅವರಲ್ಲಿರುವ ಯಾವ ಗುಣದಿಂದಾಗಿ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದರೋ, ಆ ಗುಣಗಳನ್ನು ನಾವು ನಮ್ಮಲ್ಲಿ ಪಾಲಿಸಿಅವರಂತೆ ಆದರ್ಶರಾಗಿ ವರ್ತಿಸಲು ಪ್ರಯತ್ನಿಸೋಣ.
ಲೋಕಮಾನ್ಯ ತಿಲಕರು, ಸ್ವಾತಂತ್ರ ವೀರ ಸಾವರಕರರು ಮುಂತಾದ ದೇಶಭಕ್ತರು ತಮ್ಮ ಶರೀರ ಮತ್ತು ಮನಸ್ಸುಗಳನ್ನು ಸುದೃಢವಾಗಿಟ್ಟುಕೊಳ್ಳಲು ಸಹ ಪ್ರಯತ್ನ ಮಾಡುತ್ತಿದ್ದರು. ನಮ್ಮ ಮನಸ್ಸು ಸುದೃಢವಾಗಿದ್ದರೆ ನಾವು ಯಾವುದೇ ಪ್ರಸಂಗವನ್ನು ಧೈರ್ಯದಿಂದ ಎದುರಿಸಬಲ್ಲೆವು. ಮನಸ್ಸು ಸುದೃಢವಾಗಲು ನಮ್ಮಲ್ಲಿ ಆತ್ಮವಿಶ್ವಾಸ ಬರುವುದು ಅತ್ಯಗತ್ಯವಾಗಿದೆ.
ನಮ್ಮಲ್ಲಿ ಅಮಿತವಾದ ಆತ್ಮವಿಶ್ವಾಸವಿದ್ದರೆಯಾವುದೇ ಕೆಲಸಗಳನ್ನು ಮಾಡಲು ಕಷ್ಟವಾಗುವುದಿಲ್ಲ. ಅದಕ್ಕಾಗಿ ಪ್ರತಿಯೊಂದು ಕೆಲಸ  ಮಾಡುವಾಗ ಶ್ರದ್ದೆಯಿಂದ ಮಾಡಬೇಕು ರಾಷ್ಟ್ರದ ಕೆಲಸ ದೇವರ ಸೇವೆಯಾಗಿದೆ.ವಿದ್ಯಾಥಿ೯ಗಳು ಸೇರಿದಂತೆ ಯುವ ಜನಾಂಗವು ತನ್ನ ಶರೀರವು ಸುದೃಢವಾಗಲು ವ್ಯಾಯಾಮ ಮಾಡುವುದುಈಗಿನ ಕಾಲದಲ್ಲಿ ಮನಸ್ಸನ್ನು ಸುದೃಢಗೊಳಿಸುವಂತೆ ನಮ್ಮ ಶರೀರವನ್ನು ಸಹ ಸುದೃಢವನ್ನಾಗಿಡುವುದು ಅತ್ಯಗತ್ಯವಾಗಿದೆ. ಅದಕ್ಕಾಗಿ ನಾವು ಪ್ರತಿದಿನ ವ್ಯಾಯಾಮ ಮಾಡುವುದು ಆವಶ್ಯಕವಾಗಿದೆ.ನಮ್ಮಲ್ಲಿ ನೈತಿಕಮೌಲ್ಯಗಳನ್ನು ಬೆಳೆಸಿಕೊಳ್ಳುವ ಪ್ರಯತ್ನ ಮಾಡುವುದು ಪ್ರತಿಯೊಂದು ವಿಷಯವನ್ನು ಸಮಯಕ್ಕೆ ಸರಿಯಾಗಿ ಮಾಡುವುದು, ಪ್ರಾಮಾಣಿಕವಾಗಿ ಮಾಡುವುದು ಹಿರಿಯರನ್ನು ಗೌರವಿಸುವುದು, .  ಮುಂತಾದ ವಿಷಯಗಳನ್ನು ಅಂದರೆ ನೈತಿಕ ಮೌಲ್ಯಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳುವುದು ಆವಶ್ಯಕವಾಗಿದೆ.
ಆದುದರಿಂದ ಇಂದಿನಿಂದಲೇ ನಾವು ನಮ್ಮ ದೇಶದ ಉತ್ತಮ ಪ್ರಜೆಗಳಾಗಲು ಪ್ರಯತ್ನ ಮಾಡಬೇಕು. ನಮ್ಮ ಪುಸ್ತಕದಲ್ಲಿ ನೀಡಿದ ಪ್ರತಿಜ್ಞೆಯಂತೆ ನಾವು ರಾಷ್ಟ್ರಾಭಿಮಾನ ಮತ್ತು ರಾಷ್ಟ್ರಭಕ್ತಿಯನ್ನು ಜಾಗೃತಗೊಳಿಸೋಣ ಮತ್ತು ಇಡೀ ಜಗತ್ತಿನಲ್ಲಿ ನಮ್ಮ ರಾಷ್ಟ್ರದ ಹೆಸರನ್ನು ಉಜ್ವಲಗೊಳಿಸಲು ಸನ್ನದ್ಧರಾಗಬೇಕು. ಇಂದಿನ ದಿನದಂದು ಭಾರತಮಾತೆಯನ್ನು ಆನಂದದಲ್ಲಿಡುವ ಪ್ರತಿಜ್ಞೆಯನ್ನು ಮಾಡೋಣ.
ನಾವು ಇಂದು ರಾಜಕೀಯ ಸ್ವಾತಂತ್ರ ಮಾತ್ರ ಪಡೆದಿಲ್ಲ ಬದಲಾಗಿ ವಿವಿಧ ರೀತಿಯ ಸ್ವಾತಂತ್ರ್ಯ ಪಡೆದಿದ್ದೇವೆ. ನಮ್ಮ ಸಂವಿಧಾನ ನಮಗೆ ಮೂಲಭೂತ ಹಕ್ಕುಗಳೊಂದಿಗೆ ಕತ೯ವ್ಯವನ್ನು ನೀಡಿದೆ ಇದನ್ನು ನಾವು ಮನಗಾಣಬೇಕು ಸಮಾಜದಲ್ಲಿ ಇಂದು ನಡೆಯುತ್ತಿರುವ ಗಲಭೆಗಳು ಸಾವ೯ಜನಿಕ ಆಸ್ತಿಪಾಸ್ತಿಯನ್ನು ಹಾನಿ ಮಾಡುವುದು ಇದನ್ನು ಕಂಡಾಗ ನಾವು ನಮ್ಮ ಕತ೯ವ್ಯದಲ್ಲಿ ಎಲ್ಲಿಯೋ ಒಂದು ಕಡೆ ಸೋತಿದ್ದೇವೆ – ದೇಶದ ಭದ್ರತೆಗೆ ಕುಂದು ತರುವ ದೇಶ ವಿರೋಧಿಗಳನ್ನು ಶಿಕ್ಷಿಸಬೇಕು.ಸ್ವಾತಂತ್ರ್ಯ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಅದು ತ್ಯಾಗದ ಸಂಕೇತವಾಗಿದೆ ಎಂಬುದನ್ನು ನಾವು ಮರೆಯಬಾರದು.
 *ದೇಶ ಮೊದಲು..*
ನಮಗೆ ಜಾತಿ ಮತ ಧಮ೯ ಮನೆಯ ಆಚರಣೆಗೆ ಮಾತ್ರ ಸೀಮಿತವಾಗಬೇಕು ದೇಶವು ಎಲ್ಲಕ್ಕಿಂತ ಮೊದಲು ‘ ಎಂಬುದನ್ನು ಮರೆಯಬಾರದು ನಮ್ಮ ಸೈನಿಕರು ಗಡಿಯಲ್ಲಿ ಬಿಸಿಲು ಚಳಿಯನ್ನು ಲೆಕ್ಕಿಸದೆ ಎಚ್ಚರವಾಗಿ ಕತ೯ವ್ಯ ನಿವ೯ಹಿಸುತ್ತಿರುವ ಕಾರಣ ನಾವು ಆರಾಮವಾಗಿ ಮಲಗಲು ಸಾಧ್ಯವಾಗಿದೆ ಹೀಗಾಗಿ ನಾವೆಲ್ಲರೂ ಅವರನ್ನು ಅಭಿನಂದಿಸಬೇಕಾಗಿದೆ.“ಜನನಿ ಜನ್ಮ ಭೂಮಿಶ್ಚ ಸ್ವಗ೯ದಪಿ ಗರಿಯಸಿ “ ಎಂಬಂತೆ ತಾಯಿ ಮತ್ತು ಭೂಮಿ ಸ್ವಗ೯ ಕ್ಕಿಂತ ಮೇಲು .ದೇಶ ಉಳಿದರೆ ಮಾತ್ರ ನಾವು ಉಳಿಯುವುದು ಎಂಬ ಸತ್ಯ ನಮಗೆ ತಿಳಿದಿರಬೇಕು.ನಮ್ಮ ದೇಶ ಮತ್ತೆ ಜಗತ್ತಿಗೆ ಗುರುವಾಗ ಬೇಕಾದರೆ ಪ್ರತಿಯೊಬ್ಬರ ಕೊಡುಗೆ ಅಗತ್ಯವಿದೆ.ಈ ಸ್ವಾತಂತ್ರ ನಮಗೆ ದಾರಿದೀಪವಾಗಲಿ.
* *ರಾಘವೇಂದ್ರ ಪ್ರಭು,ಕವಾ೯ಲು ಯುವ ಲೇಖಕ

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter