Published On: Mon, Sep 21st, 2020

ಬಂಟ್ಚಾಳ ಸರಕಾರಿ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಕೋವಿಡ್ ಹಿನ್ನೆಲೆಯಲ್ಲಿ ಕೈಗೊಂಡ ಕ್ರಮಗಳು ಮತ್ತು ಸೌಲಭ್ಯಗಳ ಪರಿಶೀಲನೆ ನಡೆಸಿದರು.d2f13a64-ac83-4093-8a4f-3f9ba73c615a
ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಮತ್ತು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಪುಷ್ಪಲತಾ ಆಸ್ಪತ್ರೆಗೆ ಸಂಬಂಧಪಟ್ಟ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ನೀಡಿದರು. ಇದೇ ವೇಳೆ ಬಾಳ್ತಿಲದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ಜಿಲ್ಲಾಧಿಕಾರಿ ಭೇಟಿ ನೀಡಿದರು. ಈ ವೇಳೆ ತಹಸೀಲ್ದಾರ್ ರಶ್ಮಿ ಎಸ್.ಆರ್, ಅಧಿಕಾರಿಗಳು ಉಪಸ್ಥಿತರಿದ್ದು ಪೂರಕ ಮಾಹಿತಿಯನ್ನು ನೀಡಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter