Published On: Wed, Oct 21st, 2020

ಚಿನಾದನಂದ ಎಂ ಗೌಡ ಬಿಜೆಪಿ ಚುನಾವಣಾ ಪ್ರಚಾರ ಸಭ

ಶ್ರೀನಿವಾಸಪುರ: ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಲೋಕಸಭಾ ಸದಸ್ಯ ಎಸ್‌.ಮುನಿಸ್ವಾಮಿ ಮನವಿ ಮಾಡಿದರು.

ಪಟ್ಟಣದ ಕನಕ ಸಮುದಾಯ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಬಿಜೆಪಿ ಅಭ್ಯರ್ತಿ ಚಿನಾದನಂದ ಎಂ ಗೌಡ, ಪದವೀಧರರ ಸೇವೆ ಮಾಡುವ ಉದ್ದೇಶದಿಂದ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಬಿಜೆಪಿ ಸರ್ಕಾರದ ಸಾಧನೆ ಅವರಿಗೆ ಶ್ರೀರಕ್ಷೆಯಾಗಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಅಲೆ ಬಲವಾಗಿದೆ. ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವುದು ನಿಶ್ಚಿತ. ಈ ಹಿಂದೆ ಈ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅಭ್ಯರ್ಥಿ ಅನುಕಂಪದ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಆದರೆ ಅವರ ಸಾಧನೆ ಏನೇನು ಇಲ್ಲ ಎಂದು ಹೇಳದರು.
ಶ್ರೀನಿವಾಸಪುರ ಚುನಾವಣಾ ಕ್ಷೇತ್ರದಲ್ಲಿ ಅನರ್ಹ ವ್ಯಕ್ತಿಗಳನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ. ಅದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳನ್ನು ಕೋರಲಾಗುವುದು. ಚುನಾವಣಾ ಸಿಬ್ಬಂದಿ ನಕಲಿ ಮತದಾನ ನಡೆಯದಂತೆ ಎಚ್ಚರ ವಹಿಸಬೇಕು. ಚುನಾವಣೆ ನ್ಯಾಯಯುತವಾಗಿ ನಡೆಯಬೇಕು ಎಂದು ಹೇಳಿದರು.
ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್‌.ವೇಣುಗೋಪಾಲ್‌ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳು ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ದಿಗೆ ಪೂರಕವಾಗಿವೆ. ಆದ್ದರಿಂದಲೇ ಮತದಾರರ ಒಲವು ಬಿಜೆಪಿ ಕಡೆಗಿದೆ. ಎಂದು ಹೇಳಿದರು.
ಬಿಜೆಪಿ ಅಭ್ಯರ್ಥಿ ಚಿದಾನಂದ ಎಂ.ಗೌಡ, ಮುಖಂಡರಾದ ಕೇಶವ ಪ್ರಸಾದ್‌, ಎಸ್‌.ವಿ.ಮುನಿವೆಂಕಟಪ್ಪ, ಕಾಂತರಾಜ್‌, ನಾಗರಾಜ್‌, ಅಶೋಕರೆಡ್ಡಿ, ವಿಐಪಿ ನಾಗರಾಜ್‌, ಇ.ಶಿವಣ್ಣ, ಎಂ.ಲಕ್ಷ್ಮಣಗೌಡ, ಜಯರಾಮರೆಡ್ಡಿ ಇದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter