Published On: Wed, Nov 18th, 2020

ಪಂಚಾಯತ್ ಚುನಾವಣೆ, ಗುರುಪುರ ಬ್ಲಾಕ್ ಕಾಂಗ್ರೇಸ್ ಕಾರ್ಯಕರ್ತರ ಪೂರ್ವಬಾವಿ ಸಭೆ

ಕೈಕಂಬ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯಗಳನ್ನು ಜನರು ತಿಳಿಯುವಂತೆ ಮಾಡಬೇಕು ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆಸಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಗ್ರಾಮೀಣ ಭಾಗದ ಜನರು ತಿಳಿದುಕೊಂಡಿಲ್ಲ. ಗ್ರಾಮ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಕೆಲಸಗಳನ್ನು ಮನೆ ಮನೆಗೆ ಮುಟ್ಟಿಸುವಂತೆ ಕಾರ್ಯಕರ್ತರು ಶ್ರಮಿಸಬೇಕು ಹಾಗೂ ಸಮಾಜದ ಎಲ್ಲ ವರ್ಗಗಳ ಹಿತಾಸಕ್ತಿಯಿಂದ ಕಾರ್ಯಕರ್ತರು ನಿರಂತರ ಕೆಲಸ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕಾರ್ಯಕರ್ತರಿಗೆ ಕರೆ ನೀಡಿದರು.IMG_6784

ಗುರುಪುರ ಕೈಕಂಬದ ಖಾಸಗಿ ಸಭಾಂಗಣವೊಂದರಲ್ಲಿ ಮಂಗಳವಾರ ಆಯೋಜಿಸಲಾದ ಪಂಚಾಯತ್ ಚುನಾವಣಾ ಪೂರ್ವಬಾವಿ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

IMG_6752

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ರೈತ ಸಮುದಾಯದ ನಿರ್ನಾಮಕ್ಕಾಗಿ ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆಯಲ್ಲಿ ತಿದ್ದುಪಡಿ ತಂದಿದೆ. ಕೊರೊನಾ ಸಂದರ್ಭದಲ್ಲಿ ತೈಲ, ಗ್ಯಾಸ್ ಬೆಲೆ ಹೆಚ್ಚಿಸಿ, ಸಬ್ಸಿಡಿ ಹಿಂಪಡೆದಿರುವ ಕೇಂದ್ರ ಸರ್ಕಾರ `ಬಡವರ ರಕ್ತ ಹೀರುವ’ ಕೆಲಸ ಮಾಡಿದೆ. ದೇಶದ ಸಂಪತ್ತು ಮಾರಾಟ ಮಾಡಲು ಹೊರಟಿರುವ ಮೋದಿ ಸರ್ಕಾರ, ಬಡವರ ದಮನಕಾರಿ ನೀತಿಗಳ ಅನುಷ್ಠಾನಕ್ಕೆ ಒತ್ತು ನೀಡುತ್ತಿದೆ ಎಂದು ಟೀಕಿಸಿದರು.

vp 03

ಈ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಗುಡುಗಿದ ಮಾಜಿ ಸಚಿವ ರಮಾನಾಥ ರೈ, ದಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮಾಜಿ ಎಂಎಲ್‌ಸಿ ಐವನ್ ಡಿಸೋಜ, ಮಾಜಿ ಸಚಿವ  ಶಾಸಕ ಯು ಟಿ ಖಾದರ್ ಅವರುಗಳು ಮುಂದಿನ ಪಂಚಾಯತ್ ಚುನಾವಣೆಯಲ್ಲಿ ಮನಸ್ತಾಪವನ್ನು ಬಿಟ್ಟು ಎಲ್ಲಾ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಲು ಕರೆ ನೀಡಿದರು.vp 06

vp 07

ಇದೇ ಸಂದರ್ಭದಲ್ಲಿ ಯೂರೋಪ್ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪಡೆದಿರುವ ಮಾಜಿ ಶಾಸಕ ಮೊಯಿದಿನ್ ಬಾವರಿಗೆ ಕಾಂಗ್ರೆಸ್ ಮುಖಂಡರು ಸನ್ಮಾನಿಸಿದರು. ಸನ್ಮಾನಕ್ಕುತ್ತರಿಸಿದ ಬಾವ, ಗ್ರಾಮ ಪಂಚಾಯತ್ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ, ಗುರುಪುರ ಹೋಬಳಿಯ ೧೩ ಗ್ರಾಮ ಪಂಚಾಯತ್‌ಗಳಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತೆ ಶ್ರಮಿಸಿಬೇಕು. ಕೇಂದ್ರದ ಖಾಸಗೀಕರಣ ನೀತಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೆಲ್ಲರೂ ಒಗ್ಗೂಡಿ ಹೋರಾಟ ನಡೆಸುವ ಕಾಲ ಬಂದಿದೆ ಎಂದರು.vp 05


vp 04

ಈ ಸಂದರ್ಭದಲ್ಲಿ ಮಲ್ಲೂರಿನ ಆರು ಮಂದಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ಗೆ ಸೇರ್ಪಡೆಗೊಂಡರು. ಸಭೆಯಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಂಬಳಿ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಶೆಟ್ಟಿ, ಮುಖಂಡರಾದ ಯು ಪಿ ಇಬ್ರಾಹಿಂ, ಸಚಿನ್ ಅಡಪ, ಸುನಿಲ್ ಜಿ, ಗಿರೀಶ್ ಆಳ್ವ, ಸುರತ್ಕಲ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿಕಲಾ,  ಕೆ.ಪಿ.ಸಿ.ಸಿ ಸದಸ್ಯರು ಅಪ್ಪಿ ಎಸ್ , ಗುರುಪುರ ಬ್ಲಾಕ್ ಮಹಿಳಾ ಅಧ್ಯಕ್ಷೆ ಸೆಲಿನಾ ಫೆರ್ನಾಂಡಿಸ್, ಪಿ. ಮೋಹನ್, ಇಂಟಕ್ ಮುಖಂಡ ಸಂಪತ್ ಲೋಬೊ, ದಕ ಸೇವಾ ದಳ ಅಧ್ಯಕ್ಷ ಸುರೇಶ್ ಶೆಟ್ಟಿ, ಗುರುಪುರ ಬ್ಲಾಕ್ ಕಾಂಗ್ರೇಸ್ ಪ್ರ. ಕಾಯದರ್ಶಿ ಬಾಷಾ ಮಾಸ್ಟರ್, ಕಂದಾವರ ಗ್ರಾ. ಪಂ.ಮಾಜಿ ಅಧ್ಯಕ್ಷೆ ವಿಜಯ ಗೋಪಾಲ್ ಸುವರ್ಣ, ಗಣೇಶ್ ಪೂಜಾರಿ, ಪುರುಷೋತ್ತಮ ಮಲ್ಲಿ,ಗಂಜಿಮಠ ಗ್ರಾಂ. ಪಂ. ಮಾಜಿ ಉಪಾಧ್ಯಕ್ಷ ಆರ್ ಎಸ್ ಜಾಕಿರ್, ಜಿ ಎಂ ಉದಯ ಭಟ್, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು. ಸುರೇಂದ್ರ ಕಂಬಳಿ ಸ್ವಾಗತಿಸಿದರೆ, ರೆಹಮಾನ್ ಖಾನ್ ಕುಂಜತ್ತಬೈಲ್ ಕಾರ್ಯಕ್ರಮ ನಿರೂಪಿvp 08ಸಿದರು. ಗಿರೀಶ್ ಆಳ್ವ ವಂದಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter