ಪುದು : ಮಕ್ಕಳ ಹಕ್ಕುಗಳ ಗ್ರಾಮಸಭೆ
ಬಂಟ್ವಾಳ: ತಾಲೂಕಿನ ಪುದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮಕ್ಕಳ ಹಕ್ಕುಗಳ ಗ್ರಾಮಸಭೆ ನಡೆಯಿತು. . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಜೀರು ಶಾಲಾ ವಿದ್ಯಾರ್ಥಿ ಇರ್ಶದ್ ವಹಿಸಿದ್ದರು. ಮಕ್ಕಳಲ್ಲಿನ ಕುಂದು ಕೊರತೆಗಳು, ಮಕ್ಕಳ ಹಕ್ಕುಗಳು, ಮಕ್ಕಳಿಗಾಗಿಯೇ ಇರುವ ಕಾನೂನುಗಳ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.
ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಉಪಾಧ್ಯಕ್ಷೆ ಲಿಡಿಯಾ ಪಿಂಟೋ, ಸದಸ್ಯರಾದ ಅಖ್ತಾರ್ ಹುಸೈನ್, ಭಾಸ್ಕರ್ ರೈ, ಎಂ. ಹುಸೈನ್, ರಿಯಾಝ್, ಝಾಹೀರ್ ಅಬ್ಬಾಸ್ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಾದ ಹರೀಶ್ ಕೆ.ಎ, ಕಾರ್ಯದರ್ಶಿ ಅಶ್ವಿನಿ, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.