ಬಂಟ್ವಾಳದಲ್ಲಿ ಅತೀ ಹೆಚ್ಚು ಗ್ರಾಪಂ: ರೈ
ಬಂಟ್ವಾಳ: ತಾನು ಸಚಿವನಾಗಿದ್ದ ಕಾಲದಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಗ್ರಾಮಗಳ ಅಭಿವೃದ್ಧಿಯ ಉದ್ದೇಶದಿಂದ ಹಲವು ಪಂಚಾಯತ್ ಗಳ ಪುನರ್ ವಿಂಗಡಣೆಯನ್ನು ಮಾಡಲಾಗಿದ್ದು,ಅತೀ ಹೆಚ್ಚು ಗ್ರಾಪಂನ್ನು ಬಂಟ್ವಾಳ ಕ್ಷೇತ್ರ ಹೊಂದಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಮಾಣಿ ವಲಯ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ನಾರಾಯಣ ಗುರು ಸಭಾ ಭವನದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜೇತ ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಅಭಿನಂದನಾ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡಿದ ಅವರು ನೂತನ ಸದಸ್ಯರು ಗ್ರಾಮದ ಸರ್ವತೋಮುಖ ಅಭಿವೃದ್ದಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಕೇಂದ್ರ ಮತ್ತು ರಾಜ್ಯ ಸರಕಾರದ ಬಿಜೆಪಿ ಆಡಳಿತದಿಂದಾಗಿ ಜನತೆ ಕಂಗಾಲಾಗಿದೆ, ಬೆಲೆಯೇರಿಕೆ, ಭ್ರಷ್ಟಾಚಾರ, ನಿರುದ್ಯೋಗ ದಂತಹ ಹಲವಾರು ಸಮಸ್ಯೆ ಗಳನ್ನು ಎದುರಿಸುತ್ತಿದೆ ಈ ನಿಟ್ಟಿನಲ್ಲಿ ದೇಶದ ಒಳಿತಿಗಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಿ ಎಂದು ಕರೆ ನೀಡಿದ ಅವರು ಕಾಂಗ್ರೆಸ್ ಮುಕ್ತ ಕರ್ನಾಟಕ ಬಿಜೆಪಿಯ ಉದ್ದೇಶವಾದರೆ, ಹಸಿವು ಮುಕ್ತ ಕರ್ನಾಟಕ ಕಾಂಗ್ರೆಸ್ ನ ಸಂಕಲ್ಪವಾಗಿದೆ ಎಂದರು.
. .
ಜಿ .ಪಂ . ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಮ್.ಎಸ್. ಮೊಹಮ್ಮ ದ್ ಮಾತನಾಡಿದರು. ತಾಲೂಕು ಪಂಚಾಯತ್ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ ಪೂಜಾರಿ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪ್ರಮುಖರಾದ ಜಗನ್ನಾಥ ಚೌಟ, ಈಶ್ವರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಇದೇ ವೇಳೆ ಹಿರಿಯ ಕಾಂಗ್ರೇಸಿಗರಾದ ಬಾಲಕೃಷ್ಣ ಶೆಟ್ಟಿ ಕೊಡಾಜೆ, ವೆಂಕಪ್ಪ ಪೂಜಾರಿ, ರಾಜ್ ಕುಮಾರ್ ಹೆಗ್ಡೆ, ಹಮೀದ್ ಇನಾಮ್ ಮಾಣಿ, ಅಬ್ದುಲ್ ಅಝೀಝ್ ಸೂರಿಕುಮೇರು, ಪಾವುಲ್ ಡಯಾಸ್ ಸೂರಿಕುಮೇರು, ಅಬ್ದುಲ್ ಖಾದ್ರಿ ಸೂರಿಕುಮೇರು ಇವರನ್ನು ಗೌರವಿಸಲಾಯಿತು. ಮಾಣಿ ಗ್ರಾ.ಪಂ. ಗೆ ನೂತನ ಸದಸ್ಯರಾಗಿ ಆಯ್ಕೆಯಾದ ಬಾಲಕೃಷ್ಣ ಆಳ್ವ ಕೊಡಾಜೆ, ಸುದೀಪ್ ಕುಮಾರ್ ಶೆಟ್ಟಿ ಕೊಡಾಜೆ, ಇಬ್ರಾಹಿಂ ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ ಡಿ.ಪೂಜಾರಿ, ಪ್ರೀತಿ ಡಿನ್ನಾ ಪಿರೇರಾ, ಸುಜಾತ, ಸೀತಾ ಹಾಗೂ ಪರಾಜಿತ ಅಭ್ಯರ್ಥಿಗಳಾದ ನಾಗರಾಜ ಪೂಜಾರಿ, ಸುನಂದಾ ಇವರನ್ನು ಅಭಿನಂದಿಸಲಾಯಿತು.
ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಯುವ ಕಾಂಗ್ರೆಸ್ ಅಧ್ಯಕ್ಷ ವಿಕೇಶ್ ಶೆಟ್ಟಿ ವಂದಿಸಿದರು. ಮಾಣಿ ವಲಯ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಆಳ್ವ ನಿರೂಪಿಸಿದರು..