ಶ್ರೀರಾಮ ಪದವಿ ಕಾಲೇಜಿನಲ್ಲಿ ಅಗತ-ಸ್ವಾಗತ ಕಾರ್ಯಕ್ರಮ
ಬಂಟ್ವಾಳ: ಮಕರ ಸಂಕ್ರಾಂತಿಯಂದು ಪದವಿ ವಿಭಾಗದ ನೂತನ ‘ಪ್ರೇರಣಾ’ ಸಭಾಭವನದ ಉದ್ಘಾಟನಾ ಕಾರ್ಯಕ್ರಮ ಮತ್ತು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪ್ರವೇಶೋತ್ಸವ ಅಗತ-ಸ್ವಾಗತ ಕಾರ್ಯಕ್ರಮ ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ನಡೆಯಿತು.



ಪುತ್ರೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಇವರು ಸಭಾಭವನವನ್ನು ಉದ್ಘಾಟಿಸಿ, ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು, ಮುಖ್ಯ ಅತಿಥಿಯಾಗಿ ಭಾಗವಹಿಸಿದದ ವಿವೇಕಾನಂದ ಪದವಿ ಮಹಾವಿದ್ಯಾಲಯದ ಸಂಚಾಲಕರಾದ ಮುರಳಿ ಕೃಷ್ಣ ಅವರು ಮಾತನಾಡಿ ನಮ್ಮ ಸಾಂಸ್ಕೃತಿಕ ವೈಭವವನ್ನು ಪುನರ್ ಸ್ಥಾಪಿಸಲು ವಿದ್ಯಾರ್ಥಿಗಳು ಪಣತೊಡಬೇಕು ಎಂದರು.

ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕರಾದ ವಸಂತ ಮಾಧವ ಹಾಗೂ ಪದವಿ ವಿಭಾಗದ ಪ್ರಾಂಶುಪಾಲರಾದ ಕೃಷ್ಣಪ್ರಸಾದ ಕಾಯರ್ ಕಟ್ಟೆ ಇವರು ಉಪಸ್ಥಿತರಿದ್ದರು.

ರಾಜ್ಯಶಾಸ್ತ್ರ ಪ್ರಾಧ್ಯಾಪಕಿ ಜಯಲಕ್ಷ್ಮಿ ಸ್ವಾಗತಿಸಿ, ವಾಣಿಜ್ಯಶಾಸ್ತ್ರ ವಿಭಾಗದ ಗೌರಿ ನಿರೂಪಿಸಿ, ದೀಕ್ಷಿತಾ ವಂದಿಸಿದರು. ಈ ಸಂದರ್ಭದಲ್ಲಿ ೨ಮತ್ತು ೩ ನೇ ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟ್ಯಾಪ್ ವಿತರಿಸಲಾಯಿತು.
