ಕುಕ್ಕಿಪಾಡಿ ಬದ್ಯಾರು ಕೆರೆ ಪುನಶ್ಚೇತಕ್ಕೆ ಚಾಲನೆ
ಬಂಟ್ವಾಳ : ತಾಲ್ಲೂಕಿನ ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬದ್ಯಾರು ಎಂಬಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಭಿವೃ ದ್ಧಿಗೊಳಿಸುವ ‘ನಮ್ಮೂರು ನಮ್ಮ ಕೆರೆ’ ಯೋಜನೆ ಕಾರ್ಯಕ್ರಮಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿ ಗುತ್ತು ಸೋಮವಾರ ಚಾಲನೆ ನೀಡಿದರು. ಇಲ್ಲಿನ ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬದ್ಯಾರು ಎಂಬಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಭಿವೃದ್ಧಿಗೊಳಿಸುವ ‘ನಮ್ಮೂರು ನಮ್ಮ ಕೆರೆ’ ಯೋಜನೆ ಕಾರ್ಯಕ್ರಮಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿ ಗುತ್ತು ಸೋಮವಾರ ಚಾಲನೆ ನೀಡಿದರು. ಸಾರ್ವಜನಿಕ ಕೆರೆಗಳ ಪುನಶ್ಚೇತನದಿಂದ ನೀರಿನ ಮೂಲ ಸಂರಕ್ಷಣೆ ಮತ್ತು ಭೂಮಿಯಲ್ಲಿ ಒರತೆ ಪ್ರಮಾಣ ಹೆಚ್ಚಳವಾಗುತ್ತದೆ ಎಂದರು.
ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಕುತ್ಲೋಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಾಭಿವೃದ್ದಿ ಯೋಜನೆ ಪ್ರಾದೇಶಿಕ ನಿರ್ದೇಶಕ ವಸಂತ್ ಸಾಲ್ಯಾನ್, ನಿರ್ದೇಶಕ ಸತೀಶ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ, ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರಭಾಕರ ಪ್ರಭು, ಕುಕ್ಕಿಪ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ ಆರ್., ಉಪಾಧ್ಯಕ್ಷ ಯೋಗೀಶ ಆಚಾರ್ಯ, ಅಭಿವೃದ್ಧಿ ಅಧಿಕಾರಿ ತುಳಸಿ, ಮಾಜಿ ಅಧ್ಯಕ್ಷ ದಿನೇಶ್ ಸುಂದರ ಶಾಂತಿ, ಯೋಜನಾಧಿಕಾರಿ ಜಯಾನಂದ್, ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ಶ್ರೀಧರ್ ಪೈ ವಾಮದಪದವು, ಸದಾನಂದ ಸೀತಾಳ, ರಾಜೇಶ್ ಶೆಟ್ಟಿ ಕೊನೆರೊಟ್ಟು ಮತ್ತಿಒತರರು ಇದ್ದರು. ಮೇಲ್ವಿಚಾರಕಿ ಹರಿಣಾಕ್ಷಿ ರೈ ಸ್ವಾಗತಿಸಿ, ಸುಧಾಕರ ಶೆಟ್ಟಿ ವಂದಿಸಿದರು. ಕೃಷಿ ಮೇಲ್ವಿಚಾರಕ ಜನಾರ್ಧನ ಕಾರ್ಯಕ್ರಮ ನಿರೂಪಿಸಿದರು.