Published On: Tue, Apr 6th, 2021

ಗುರುಪುರ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ `ಶಿಶು ಪ್ರದರ್ಶನ’ ಕಾರ್ಯಕ್ರಮ

ಕೈಕಂಬ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು(ಗ್ರಾ), ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯತ್ ಜಂಟಿ ಆಶ್ರಯದಲ್ಲಿ ಮಂಗಳವಾರ ಗುರುಪುರ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ `ಶಿಶು ಪ್ರದರ್ಶನ’ ಕಾರ್ಯಕ್ರಮ ಜರುಗಿತು. ಅಧ್ಯಕ್ಷತೆ ವಹಿಸಿದ್ದ ಗುರುಪುರ ಪಂಚಾಯತ್ ಅಧ್ಯಕ್ಷ ಯಶವಂತ ಶೆಟ್ಟಿ ಮಾತನಾಡಿ, ಹೆಣ್ಣು ಮಗುವಿನ ಶಿಕ್ಷಣ, ಆರೋಗ್ಯ ಮತ್ತು ಪೌಷ್ಠಿಕ ಆಹಾರ ಪೂರೈಕೆ ನಿಟ್ಟಿನಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು ನಡೆಸಿ ಕೊಡುವ ಎಲ್ಲ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳಿಗೆ ಪಂಚಾಯತ್ ವತಿಯಿಂದ ಪೂರ್ಣ ಸಹಕಾರ ನೀಡಲಾಗುವುದೆಂದು ಭರವಸೆ ನೀಡಿದರು.

gur-apl-6-shishu pradarshan
ಪಂಚಾಯತ್ ವ್ಯಾಪ್ತಿಯ ಮೂಳೂರು ಮತ್ತು ಅಡ್ಡೂರು ಗ್ರಾಮದ ಹಲವಾರು ಮಹಿಳೆಯರು ತಮ್ಮ ಮಕ್ಕಳೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪಂಚಾಯತ್ ಉಪಾಧ್ಯಕ್ಷೆ ದಿಲ್ಶಾದ್ ಅಶ್ರಫ್, ಸದಸ್ಯರಾದ ನಳಿನಿ ಶೆಟ್ಟಿ, ಶೋಭಾ ಎ, ಬಬಿತಾ, ಬುಶ್ರಾ ಅನ್ವರ, ರೆಹನಾ, ಸಫರಾ ಹಾಗೂ ಯೋಜನೆಯ ಮೇಲ್ವಿಚಾರಕಿ ಮಾಲಿನಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಶಿಶುವಿನ ತೂಕ, ಎತ್ತರ, ಕುಟುಂಬ ಯೋಜನೆ ಮಾನದಂಡದನ್ವಯ ಸ್ಪರ್ಧೆಯಲ್ಲಿ ಪಾಲ್ಗೊಂಡ ಮಕ್ಕಳಿಗೆ ನಗದು ಬಹುಮಾನ ನೀಡಲಾಯಿತು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter