ಬಂಟ್ವಾಳ: ಯಾವುದೇ ಅಹಿತಕರ ಘಟನೆ ನಡೆಯುವ ಬಗ್ಗೆ ಮುನ್ಸೂಚನೆ ದೊರೆತಲ್ಲಿ ಪೊಲೀಸರಿಗೆ ಮಾಹಿತಿ ನೀಡಿ ಎಂದು ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ರಶ್ಮಿ ಪರಡಿ ಹೇಳಿದರು.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ನಡೆದ ಶಾಂತಿ ಸಭೆಯಲ್ಲಿ ಬಾಗವಹಿಸಿ ಅವರು ಮಾತನಾಡಿದರು. ಮುಂದಿನ ದಿನಗಳಲ್ಲಿ ಹಬ್ಬ ಹರಿದಿನಗಳು ಇರುವ ಹಿನ್ನಲೆಯಲ್ಲಿ ಶಾಂತಿ ಸಭೆಯನ್ನು ನಡೆಸಲಾಗಿದೆ. ಸಮಾಜ ಶಾಂತಿ ಸೌಹಾರ್ದತೆಗೆ ಧಕ್ಕೆ ಬಾರದೆ ಇರಬೇಕಾದರೆ ನಾಗರೀಕರು ಪೊಲೀಸರಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

2 (3)

1
ನಗರ ಠಾಣಾ ಉಪನಿರೀಕ್ಷಕ ನಂದ ಕುಮಾರ್ ಮಾತನಾಡಿ ವಿವಿಧ ಸಮುದಾಯದ ಮುಖಂಡರೊಂದಿಗೆ, ಜನನಾಯಕರೊಂದಿಗೆ ಸೌಹಾರ್ದತಯುತವಾಗಿ ಚರ್ಚೆ ನಡೆಸಿದಾಗ ಆಯಾ ಊರುಗಳ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ಹಿರಿಯರ ಅನುಭವಗಳನ್ನು ಇಟ್ಟುಕೊಂಡು ಕರ್ತವ್ಯ ನಿರ್ವಹಿಸುವುದಾಗಿ ಅವರು ತಿಳಿಸಿದರು. ಇದು ಕೇವಲ ಶಾಂತಿ ಸಭೆ ಅಲ್ಲ. ಯಾವುದೇ ಸಮಸ್ಯೆಗಳಿದ್ದರೂ ನಮ್ಮ ಗಮನಕ್ಕೆ ತರಬಹುದು ಎಂದು ತಿಳಿಸಿದರು. ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಟ್ರಾಫಿಕ್ ಸಮಸ್ಯೆ, ಪಾರ್ಕಿಂಗ್ ಸಮಸ್ಯೆಗಳ ಬಗ್ಗೆ ನಗರೀಕರು ಪೊಲಿಸರಿಗೆ ತಿಳಿಸಿದರು. ಪ್ರಮುಖರಾದ ಸದಾನಂದ ಮಲ್ಲಿ, ದೇವಿಪ್ರಸಾದ್ ಪೂಂಜಾ, ಲೋಕನಾಥ ಶೆಟ್ಟಿ, ವೆಂಕಪ್ಪ ಪೂಜಾರಿ, ಬೇಬಿ ನಾಯ್ಕ್ ಮತ್ತಿತರರು ಹಾಜರಿದ್ದು ಸಲಹೆ ನೀಡಿದರು.

By Suddi9

Leave a Reply

Your email address will not be published. Required fields are marked *