ಸುದ್ದಿ9:ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಕಾಶ್ಮೀರ ನೆರೆ ಸಂತ್ರಸ್ತರಿಗೆ ಸೋಮವಾರ ಏರ್ಪಡಿಸಿದ್ದ ಪರಿಹಾರ ನಿಧಿ ಸಂಗ್ರಹ ಪಾದಯಾತ್ರೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಬಿಜೆಪಿ ಮುಖಂಡರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಜಿ.ಆನಂದ, ಸುಲೋಚನಾ ಜಿ.ಕೆ.ಭಟ್, ಯಶವಂತ ದೇರಾಜೆ, ಪುರುಷ ಸಾಲ್ಯಾನ್ ನೆತ್ತರಕೆರೆ, ರಾಮದಾಸ ಬಂಟ್ವಾಳ, ದಿನೇಶ್ ಅಮ್ಟೂರು, ಪುರುಷ ಸಾಲ್ಯಾನ್ ಶಂಭೂರು, ಪ್ರಕಾಶ್ ಅಂಚನ್, ಅಶೋಕ್ ಶೆಟ್ಟಿ ಸರಪಾಡಿ, ಭಾಸ್ಕರ ಟೈಲರ್ ಮತ್ತಿತರರು ಪಾಲ್ಗೊಂಡರು.

