ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಕೈಗೆತ್ತಿಕೊಳ್ಳಲಿದೆ.
ಜಯಾ ಜಾಮೀನು ಅರ್ಜಿಯನ್ನು ಅಕ್ಟೋಬರ್ 7ರಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಜಯಲಲಿತಾ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಅಕ್ಟೋಬರ್ 17ರಂದು ಅರ್ಜಿ ವಿಚಾರಣೆಗೆ ಬರಲಿದೆ.
66 ವರ್ಷದ ಹಿರಿಯ ರಾಜಕಾರಣಿ ಜಯಲಲಿತಾ ಅವರ ಪರ ಖ್ಯಾತ ವಕೀಲ ಪಾಲಿ ನಾರಿಮನ್ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿ ಸ್ವೀಕರಿಸಿದ ಕೋರ್ಟ್, ಪ್ರತಿವಾದಿಗಳಿಗೆ ಯಾವುದೇ ನೋಟಿಸ್ ನೀಡದೇ ವಿಚಾರಣೆಯನ್ನು ಅಕ್ಟೋಬರ್ 17ರಂದು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದೆ. ಈ ಹಿಂದೆ ಕಾವೇರಿ ನದಿ ನೀರು ಹಂಚಿಕೆ ವಿವಾದ ಪ್ರಕರಣದಲ್ಲಿ ಜಯಾ ವಿರುದ್ಧ ವಾದಿಸಿದ್ದ ನಾರಿಮನ್ ಅವರು ಈಗ ಅವರ ಪರವಾಗಿ ವಾದ ಮಂಡಿಸಲಿದ್ದಾರೆ..

