ಬಂಟ್ವಾಳ ತಾಲ್ಲೂಕಿನ ವಿಟ್ಲದಲ್ಲಿ ನಡೆಯುವ ರಾಜ್ಯಮಟ್ಟದ ಯುವಜನ ಮೇಳದಲ್ಲಿ ತಾಲ್ಲೂಕಿನ ಎಲ್ಲಾ ಯುವಕ-ಯುವತಿ ಮಂಡಲಗಳಿಗೆ ಆದ್ಯತೆ ನೀಡದೆ ಕಡೆಗಣಿಸಲಾಗಿದೆ ಎಂದು ಆರೋಪಿಸಿ ತಹಶೀಲ್ದಾರ್ ಬಿ.ಎಸ್.ಮಲ್ಲೇಸ್ವಾಮಿ ಅವರಿಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ನೇತೃತ್ವದ ತಂಡವು ಮಂಗಳವಾರ ಮನವಿ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು.

