ಸುದ್ದಿ9 ಬಂಟ್ವಾಳ ತಾಲ್ಲೂಕಿನ ಮೆಲ್ಕಾರ್ ರಾಷ್ಟ್ರೀಯ ಹೆದ್ದಾರಿ ಬಳಿ ಮಹಡಿಯೊಂದರ ಜಗುಲಿಯಲ್ಲಿ ಮಲಗಿ ನಿದ್ರಿಸಿಕೊಂಡಿದ್ದ ವ್ಯಕ್ತಿಯೊಬ್ಬರು ಕೆಳಗೆ ಉರುಳಿ ಬಿದ್ದು ಶಂಕಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.
ಮೃತರನ್ನು ನರಿಕೊಂಬು ನಿವಾಸಿ ಸುಂದರ ಪೂಜಾರಿ(48) ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಸ್ಥಳೀಯರು ಬಂದು ನೋಡಿದಾಗ ವಿಷಯ ತಿಳಿದು ಬಳಿಕ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
