ಬಂಟ್ವಾಳ: ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರಭಾ ಅವರ ಹುಟ್ಟೂರು ಅಮ್ಟೂರಿನ ಮನೆ ನಂದಗೋಕುಲಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಂಗಳವಾರ ಸಂಜೆ ಭೇಟಿ ನೀಡಿದರು.

ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ ಅವರು, ಆರೋಪಿಗಳ ಬಂಧನದ ಕುರಿತಾಗಿ ಕೇಂದ್ರದ ಮೂಲಕ ಆಸ್ಟ್ರೇಲಿಯಾ ಸರ್ಕಾರವನ್ನು ಒತ್ತಾಯಿಸುವ ಕಾರ್ಯ ರಾಜ್ಯ ಸರ್ಕಾರ ನಡೆಸುತ್ತಿದೆ, ಮೃತದೇಹವನ್ನು ಭಾರತಕ್ಕೆ ತರಿಸುವ ಹಂತದಲ್ಲಿ ಅಗತ್ಯ ನೆರವು ನೀಡಲು ಸರ್ಕಾರ ಬದ್ದವಾಗಿದೆ ಎಂದವರು ಪ್ರಭಾರವರ ಮನೆಮಂದಿಗೆ ತಿಳಿಸಿದರು. ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಅಬ್ಬಾಸ್ ಆಲಿ, ಪದ್ಮನಾಭ ರೈ, ನಿರಂಜನ್ ಜೈನ್ ಮತ್ತಿತರರು ಸಚಿವರ ಜೊತೆಗಿದ್ದರು
