ಬಂಟ್ವಾಳ :ತಾಲ್ಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸೋಣಂದೂರು ಎಂಬಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರಿಗೆ ಪದೇ ಪದೇ ಹಿಂಬಾಲಿಸಿ ಚುಡಾಯಿಸಿ ಕಿರುಕುಳ ನೀಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಪುಂಜಾಲಕಟ್ಟೆ ರಿಕ್ಷಾ ಚಾಲಕನೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ಶನಿವಾರ ನಡೆದಿದೆ.
ಆರೋಪಿಯನ್ನು ಸ್ಥಳೀಯ ಪಾರೆಂಕಿ ನಿವಾಸಿ ಲೋಕೇಶ ಶೆಟ್ಟಿ ಎಂದು ಗುರುತಿಸಲಾಗಿದೆ. ಈತನು ಕಳೆದ ಗುರುವಾರ ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳನ್ನು ಹಿಂಬಾಲಿಸಿ ಆಕೆಯ ಸೋಣಂದೂರು ಮನೆ ಬಳಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಆರೋಪಿಯನ್ನು ಪುಂಜಾಲಕಟ್ಟೆಯ ಪಣಕಜೆ ರಿಕ್ಷಾ ಪಾರ್ಕ್ ನಿಂದ ಶನಿವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
