ಬಂಟ್ವಾಳ:  ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಸಮೀಪದ ಗೂಡಿನಬಳಿ ಎಂಬಲ್ಲಿ ಸ್ಥಳಾವಕಾಶ ಹಾಗೂ ವಿವಿಧ ಮೂಲಭೂತ ಸೌಲಭ್ಯಗಳ ಕೊರತೆ ಎದುರಿಸುತ್ತಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿ ಶೇ.98 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ.
ಇಲ್ಲಿನ ಒಟ್ಟು 127 ಮಂದಿ ವಿದ್ಯಾರ್ಥಿಗಳ ಪೈಕಿ 124 ಮಂದಿ ತೇರ್ಗಡೆ ಹೊಂದಿದ್ದಾರೆ. ಈ ಪೈಕಿ ಐವರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 62 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಪ್ರಾಂಶುಪಾಲೆ ಕೆ.ಸರಸ್ವತಿ ಭಟ್ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *