ಮಂಗಳೂರು:ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಕುಡ್ಲ ಧ್ವನಿ ಪ್ರತಿಷ್ಠಾನ ಘಟಕದ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಅಕಾಡೆಮಿ ಕಚೇರಿಯಲ್ಲಿ ಏರ್ಪಡಿಸಿದ್ದ ಪ್ರಕಾಶ್‍ರಾವ್ ಪಯ್ಯಾರ್ ಅವರ ` ಉರೆತ್ತ ಕಣ್ಣ್‍ದ ಸಿರಿ’ ಕವನ ಸಂಕಲನ ಅನಾವರಣಗೊಳಿಸಿ ಮಾತನಾಡಿದರು.

ವಿಧಾನಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಮಾತಾಡಿ ಸ್ವಾತಂತ್ರ್ಯ ಪೂರ್ವದಲ್ಲಿ ಸಾಹಿತಿಗಳು ಹಕ್ಕುಗಳ ಪ್ರತಿಪಾದನೆಯನ್ನು ಮಾಡುತ್ತಿದ್ದರು. ಇಂದಿನ ಸಾಹಿತಿಗಳು ಕೂಡಾ ಅದನ್ನೇ ಮುಂದುವರಿಸುತ್ತಿದ್ದಾರೆ. ಸಮಾಜದ ಸೊಬಗುಗಳನ್ನು ವೀಕ್ಷಿಸಲು ಧನಾತ್ಮಕ ಚಿಂತನೆ ಬೇಕು ಎಂದು ಅಭಿಪ್ರಾಯಪಟ್ಟರು. ಸಮಾಜದ ವೈರುಧ್ಯವೇ ಕೇವಲ ಸಾಹಿತ್ಯವಲ್ಲ. ಅಂಕುಡೊಂಕುಗಳನ್ನು ತಿದ್ದಿ ಸಮಾಜವನ್ನು ಓಗ್ಗೂಡಿಸುವ ಕಾರ್ಯ ನಡೆಯಬೇಕು. ಈ ನಿಟ್ಟಿನಲ್ಲಿ ಸಾಹಿತ್ಯ ಮತ್ತು ಸಾಂಸ್ಕøತಿಕ ಕ್ಷೇತ್ರಗಳಲ್ಲಿ ತೊಡಗಿಕೊಂಡವರಿಗೆ ಹೆಚ್ಚಿನ ಜವಾಬ್ದಾರಿ ಇದೆ ಎಂದು ನುಡಿದರು.
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಎಂ. ಜಾನಕಿ ಬ್ರಹ್ಮಾವರ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಎನ್ನೆಸ್ಸೆಸ್‍ನ ರಾಜ್ಯ ಘಟಕ ಯೋಜನಾಧಿಕಾರಿ ಡಾ. ಗಣನಾಥ ಎಕ್ಕಾರ್ , ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ., ಕ.ಸಾ.ಪ. ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಪುತ್ತೂರು ಕ.ಸಾ.ಪ.ದ ಅಧ್ಯಕ್ಷ ಡಾ. ವರದರಾಜ ಚಂದ್ರಗಿರಿ, ಅಬುದಾಬಿಯ ತುಳು ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿಉಪಸ್ಥಿತರಿದ್ದರು.
