ಬಂಟ್ವಾಳ : ಬ್ಯಾರಿ ಫೌಂಡೇಶನ್ ಬಂಟ್ವಾಳ ಇದರ ಆಶ್ರಯದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ನಂತರ ಮುಂದೇನು? ಮಾಹಿತಿ ಕಾರ್ಯಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಬಿ.ಸಿ.ರೋಡು ಕೈಕಂಬದ ಸೂರ್ಯವಂಶ ವಾಣಿಜ್ಯ ಸಂಕೀರ್ಣದ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಮಾತನಾಡಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯವನ್ನು ರೂಪಿಸುವಲ್ಲಿ ಇಂತಹ ಕಾರ್ಯಗಾರಗಳು ಪೂರಕವಾಗಿವೆ ಎಂದರು.
ಬ್ಯಾರಿ ಫೌಂಡೇಶನ್ ಅಧ್ಯಕ್ಷ ಪಿ.ಎ. ರಹೀಂ ಅಧ್ಯಕ್ಷತೆ ವಹಿಸಿದ್ದರು. ಸೂರ್ಯವಂಶ ವಾಣಿಜ್ಯ ಸಂಕೀರ್ಣದ ಮಾಲಕ ಗೋವರ್ಧನ ಆಚಾರ್ಯ, ಪಿ.ಎ. ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಕೆ.ಪಿ. ಸೂಫಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮಂಗಳೂರು ಟ್ಯಾಲೆಂಟ್ ರಿಸಚರ್್ ಫೌಂಡೇಶನ್ ಸಲಹೆಗಾರ ರಫೀಕ್ ಮಾಸ್ಟರ್, ಅಧ್ಯಕ್ಷ ರಿಯಾಝ್ ಕಣ್ಣೂರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ಬಂಟ್ವಾಳ ಪುರಸಭಾ ಸದಸ್ಯ ಮೂನಿಶ್ ಅಲಿ, ಫೌಂಡೇಶನ್ ಸದಸ್ಯರಾದ ಲತೀಫ್ ನೇರಳಕಟ್ಟೆ, ಸಮದ್ ಕೈಕಂಬ, ಜಬ್ಬಾರ್ ನಭಾ, ಅನ್ವರ್ ಕೆ.ಎಚ್. ಉಪಸ್ಥಿತರಿದ್ದರು. ಫೌಂಡೇಶನ್ ಉಪಾಧ್ಯಕ್ಷ ಕೆ.ಎಚ್. ಅಬೂಬಕ್ಕರ್ ಸ್ವಾಗತಿಸಿ, ಕಾರ್ಯದರ್ಶಿ ಹಾರಿಸ್ ತಲಪಾಡಿ ವಂದಿಸಿದರು. ಪ್ರಧಾನ ಕಾರ್ಯದರ್ಶೀ ಅಕ್ಬರ್ ಅಲಿ ಕಾರ್ಯಕ್ರಮ ನಿರೂಪಿಸಿದರು.

23 May Beary Foundation
ಇದೇ ವೇಳೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನಲ್ಲಿ ಅತ್ಯಧಿಕ ಅಂಕ ಗಳಿಸಿದ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲಾ ವಿದ್ಯಾರ್ಥಿನಿ ಕೀರ್ತಿ  ಅವರನ್ನು ಸನ್ಮಾನಿಸಲಾಯಿತು. ಪರೀಕ್ಷೆಗೆ ಮುನ್ನ ಬ್ಯಾರಿ ಫೌಂಡೇಶನ್ ವತಿಯಿಂದ ಪ್ರೇರಣಾ ಶಿಬಿರ ಹಮ್ಮಿಕೊಂಡಿದ್ದ ಪ್ರೌಢ ಶಾಲೆಗಳಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಕೊಂಡಗೆ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ತಾಹಿರಾ ಬಾನು, ನಂದಾವರ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ  ಗೌತಮ್ ಕುಮಾರ್, ಮಣಿನಾಲ್ಕೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ರಶ್ಮಿತಾ ಹಾಗೂ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಮಣಿನಾಲ್ಕೂರು ಜ್ಯೂನಿಯರ್ ಕಾಲೇಜು ವಿದ್ಯಾರ್ಥಿ  ಸಂದೇಶ್, ಗೂಡಿನಬಳಿ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿನಿ ಸ್ವಹೀಲಾ ಬಾನು, ಬೆಂಜನಪದವು ಜ್ಯೂನಿಯರ್ ಕಾಲೇಜು ವಿದ್ಯಾರ್ಥಿನಿ ತಂಶೀರಾ ಅವರನ್ನು ಪುರಸ್ಕರಿಸಲಾಯಿತು. ಬ್ಯಾರಿ ಫೌಂಡೇಶನ್ ವತಿಯಿಂದ ನಡೆದ ಈ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಪೈಕಿ ಅತ್ಯಧಿಕ ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳನ್ನು ಉದ್ಯಮಿ ಗೋವರ್ಧನ್ ಆಚಾರ್ಯ ಅವರ ವತಿಯಿಂದ ಗೌರವ ಧನ ನೀಡಿ ಪುರಸ್ಕರಿಸಲಾಯಿತು.

By Suddi9

Leave a Reply

Your email address will not be published. Required fields are marked *