ಬಂಟ್ವಾಳ:ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರವು ಕಳೆದ ಒಂದು ವರ್ಷ ಅವಧಿಯಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಪರ ಕಾರ್ಯಕ್ರಮಗಳು ಮತ್ತು ಸಾಧನೆ ಹಾಗೂ ಜಾಗತಿಕ ಮಟ್ಟದಲ್ಲಿ ಭಾರತ ಮಾತೆಗೆ ಗೌರವ ತಂದು ಕೊಟ್ಟಿರುವ ಬಗ್ಗೆ ‘ಸಂಪರ್ಕ ಅಭಿಯಾನ’ ಮೂಲಕ ಬಿಜೆಪಿ ಕಾರ್ಯಕರ್ತರು ಎಲ್ಲೆಡೆ ಮನೆ ಮನೆಗೆ ಭೇಟಿ ನೀಡಿ ಕರಪತ್ರ ಹಂಚಿಕೆ ಮಾಡುತ್ತಿದ್ದು, ಇದರಿಂದಾಗಿ ಯಾವುದೇ ರೀತಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಸುಲೋಚನಾ ಜಿ.ಕೆ.ಭಟ್ ಸ್ಪಷ್ಟಪಡಿಸಿದ್ದಾರೆ.

ತಾಲ್ಲೂಕಿನ ಬಿ.ಸಿ.ರೋಡ್ನಲ್ಲಿ ಬುಧವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಂಟ್ವಾಳ ತಾಲ್ಲೂಕಿನ ವಾಮದಪದವು, ಕೊಳ್ನಾಡು, ನಂದಾವರ, ತುಂಬೆ ಮತ್ತಿತರ ಕಡೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮತ್ತು ಆರೋಗ್ಯ ಸಚಿವ ಯು.ಟಿ.ಖಾದರ್ ಸ್ವತಃ ಕಾರ್ಯಕರ್ತರ ಸಮಾವೇಶ ನಡೆಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಅವರು ಆರೋಪಿಸಿದರು.
ದೇಶದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೊರತುಪಡಿಸಿ ಉಳಿದಂತೆ ಶೇ.80ಕ್ಕಿಂತಲೂ ಮಿಕ್ಕಿ ಮಂದಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇದರಿಂದಾಗಿ ಪ್ರತೀ ಗ್ರಾಮ ಪಂಚಾಯಿತಿ ಬಲಪಡಿಸುವ ಕನಸು ನನಸು ಮಾಡುವಲ್ಲಿ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು. ವಿವಿಧ ಬಲಿಷ್ಟ ರಾಷ್ಟ್ರಗಳು ಮತ್ತು ಅನಿವಾಸಿ ಭಾರತೀಯರು ಭಾರತದಲ್ಲಿ ಹೂಡಿಕೆ ಮಾಡಲು ಮುಂದಾಗಿರುವುದು ದೇಶದಲ್ಲಿ ಮತ್ತಷ್ಟು ಉದ್ಯೋಗ ಸೃಷ್ಟಿಗೆ ಕಾರಣವಾಗಿದೆ.
ಜನ ಧನ್ ಅಟಲ್ ಪಿಂಚಣಿ ಯೋಜನೆ ಸಹಿತ, ಸುಕನ್ಯಾ ನಿಧಿ ಮತ್ತಿತರ ಜನಪ್ರಿಯ ಹಾಗೂ ದೂರದ್ರಿಸ್ಟಿತ್ವದ ವಿಮಾ ಯೋಜನೆಗಳು ಜನಸಾಮಾನ್ಯರಿಗಾಗಿ ದೇಶದಲ್ಲೇ ಪ್ರಥಮ ಬಾರಿಗೆ ಅನುಷ್ಠಾನಗೊಮಡಿದೆ ಎಂದು ಅವರು ವಿವರಿಸಿದರು.
ಕ್ಷೇತ್ರ ಬಿಜೆಪಿ ಅಧ್ಯಕ್ಷ ಜಿ.ಆನಂದ, ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಮಾಜಿ ಪುರಸಭಾಧ್ಯಕ್ಷ ಬಿ.ದಿನೇಶ ಭಂಡಾರಿ ಸುದ್ದಿಗೋಷ್ಠಿಯಲ್ಲಿದ್ದರು.

By Suddi9

Leave a Reply

Your email address will not be published. Required fields are marked *