ಕಲ್ಲಡ್ಕ: ಮಹಾಪುರುಷರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ರಾಷ್ಟ್ರೀಯ ಭಾವನೆಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡು ಗುರುಹಿರಿಯರ ಮಾರ್ಗದರ್ಶನದಂತೆ ಮುನ್ನಡೆಯಬೇಕೆಂದು ಕಲಾ ಶಿಕ್ಷಕ ಜಿನ್ನಪ್ಪ ಏಳ್ತಿಮಾರ್ ಹೇಳಿದರು.
gas

DSCN0073

DSCN0076
ಅವರು ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಪ್ರವೇಶೋತ್ಸವ ಹಾಗೂ ಹಿಂದೂ ಸಾಮ್ರಾಜ್ಯ ದಿನೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದರು. ವೇದಿಕೆಯಲ್ಲಿ ಶ್ರೀರಾಮ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ವಸಂತ ಮಾಧವ, ಮುಖ್ಯೋಪಾಧ್ಯಾಯ ರಮೇಶ್ ಎನ್. ಶಾಲಾಭಿವೃದ್ದಿ ಸಮಿತಿ ಕಾರ್ಯದರ್ಶಿ ಮುತ್ತಪ್ಪ ತುಳಸಿವನ ಉಪಸ್ಥಿತರಿದ್ದರು.
ಆರಂಭದಲ್ಲಿ ವಿದ್ಯಾರ್ಥಿಗಳಿಂದ ಸರಸ್ವತಿ ವಂದನೆ ಹಾಗೂ ಸಾಮೂಹಿಕ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ವಿದ್ಯಾರ್ಥಿಗಳಾದ ಹಿತಶ್ರೀ ಸ್ವಾಗತಿಸಿ, ವಾತ್ಸಲ್ಯ ವಂದಿಸಿ, ದೀಕ್ಷಾ ನಿರೂಪಿಸಿದರು.

ಶ್ರೀರಾಮ ವಿದ್ಯಾಕೇಂದ್ರ ಅನ್ನಪೂರ್ಣ ಯೋಜನೆಯ ಪಾಕಶಾಲೆಗೆ ಎಲ್.ಪಿ.ಜಿ.ಗ್ಯಾಸ್ ಮೂಲಕ ಅಡುಗೆ ತಯಾರಿಸುವ ಹಬೆಯಂತ್ರಕ್ಕೆ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಡಾ| ಪ್ರಭಾಕರ ಭಟ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ, ಕಾರ್ಯನಿರ್ವಹಣಾಧಿಕಾರಿ ವಸಂತ ಮಾಧವ, ಮುಖ್ಯೋಪಾಧ್ಯಾಯ ರಮೇಶ್ ಎನ್. ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸತೀಶ್ ಭಟ್ ಶಿವಗಿರಿ, ಜಿ.ಪಂ ಸದಸ್ಯ ಚೆನ್ನಪ್ಪ ಕೋಟ್ಯಾನ್, ಡಾ. ಕಮಲಾ ಪ್ರ.ಭಟ್, ಪದವಿ ಕಾಲೇಜಿನ ಪ್ರಾಚಾರ್ಯ ಕೃಷ್ಣಪ್ರಸಾದ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರವಿರಾಜ್ ಕಣಂತೂರು, ಜ್ಯೋತಿಷಿ ವೆಂಕಟ್ರಮಣ ಮುಚ್ಚಿನ್ನಾಯ ಮೊದಲಾದವರು ಉಪಸ್ಥಿತಿರಿದ್ದರು.

By Suddi9

Leave a Reply

Your email address will not be published. Required fields are marked *