ಬಂಟ್ವಾಳ: ವಿಶ್ವ ಪರಿಸರದ ದಿನದ ಅಂಗವಾಗಿ ಗುರುವಾರ ಬಂಟ್ವಾಳ ಜೇಸಿಐ ವತಿಯಿಂದ ಜೇಸಿ ಹಣ್ಣಿನ ತೋಟ ನಿರ್ಮಾಣ ಹಾಗೂ ಹಸ್ತಾಂತರ ಕಾರ್ಯಕ್ರಮ ಶಂಭೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಜೇಸಿ ವಲಯ ಉಪಾಧ್ಯಕ್ಷ ರಾಧಕೃಷ್ಣ ಬಂಟ್ವಾಳ್ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಆನಂದ ಸಾಲ್ಯಾನ್ ಅವರಿಗೆ ಹಣ್ಣಿನ ಗಿಡವನ್ನು ಹಸ್ತಾಂತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

BTW_JUNE4_5
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಜೇಸಿ ವಲಯ ಉಪಾಧ್ಯಕ್ಷ ರಾಧಕೃಷ್ಣ ಬಂಟ್ವಾಳ್ ಮಾತನಾಡಿ ಪರಿಸರವನ್ನು ಉಳಿಸಿ ಬೆಳೆಸುವ ಜವಬ್ದಾರಿ ಪ್ರತಿಯೊಬ್ಬನಿಗೂ ಇದೆ. ಶಾಲೆಗಳಲ್ಲಿ ಗಿಡಗಳನ್ನು ನೆಡುವುದರಿಂದ ಮಕ್ಕಳಲ್ಲಿ ಪರಿಸರ ಕಾಳಜಿ ಮೂಡುತ್ತದೆ. ಜೆಸಿಐ ಬಂಟ್ವಾಳದ ಪರಿಸರ ಸ್ನೇಹಿ ಕಾರ್ಯಕ್ರಮ ಇತರರಿಗೂ ಮಾದರಿ ಎಂದ ಅವರು ಗಿಡಗಳನ್ನು ಬೆಳೆಸಿ ರಕ್ಷಿಸುವಂತೆ ವಿದ್ಯಾರ್ಥಿಗಳಿಗೆ ಕಿವಿ ಮಾತು ನುಡಿದರು. ಅಧ್ಯಕ್ಷತೆ ವಹಿಸಿದ್ದ ಜೆಸಿಐ ಅಧ್ಯಕ್ಷ ಲೋಕೇಶ್ ಸುವರ್ಣ ಮಾತನಾಡಿ ವಿದ್ಯಾರ್ಥಿಗಳಲ್ಲಿ ಗಿಡ ನೆಡುವ ಹಾಗೂ ಅವುಗಳನ್ನು ಬೆಳೆಸುವ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಪ್ರತೀ ಗಿಡದ ಬಗ್ಗೆಯೂ ವಿದ್ಯಾರ್ಥಿಗಳು ಕಾಳಜಿ ವಹಿಸುವಂತೆ ಮನವಿ ಮಾಡಿದರು. ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಆನಂದ ಸಾಲ್ಯಾನ್ ಮಾತನಾಡಿ ಜೇಸಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಶಾಲಾ ಮುಖ್ಯ ಶಿಕ್ಷಕಿ ಲೀಲಾ, ಜೇಸಿ ಸದಸ್ಯರಾದ ಡಾ. ಬಾಲಕೃಷ್ಣ, ಯತೀಶ್ ಕರ್ಕೇರಾ, ಸದಾನಂದ ಬಂಗೇರ ಹಾಜರಿದ್ದರು
ಜೇಸಿಐ ಬಂಟ್ವಾಳದ ಪೂರ್ವಾಧ್ಯಕ್ಷ ಸಂದೀಪ್ ಸಾಲ್ಯಾನ್ ಸ್ವಾಗತಿಸಿ, ನಿರೂಪಿಸಿದರು. ಉಪಾಧ್ಯಕ್ಷ ಡಾ. ಪ್ರಶಾಂತ್ ವಂದಿಸಿದರು. 20 ಬಗೆಯ ವಿವಿಧ ಹಣ್ಣಿನ ಗಿಡಗಳನ್ನು ಜೇಸಿ ತೋಟದಲ್ಲಿ ನೆಡಲಾಯಿತು. ಜೇಸಿ ವಲಯ ಉಪಾಧ್ಯಕ್ಷ ರಾಧಕೃಷ್ಣ ಬಂಟ್ವಾಳ ಹಣ್ಣಿನ ಗಿಡವನ್ನು ಹಸ್ತಾಂತರಿಸಿದರು.

By Suddi9

Leave a Reply

Your email address will not be published. Required fields are marked *