ಬಂಟ್ವಾಳ: ಶಿಕ್ಷಣವು ಮನುಷ್ಯನನ್ನು ಒಳ್ಳೆಯ ನಾಗರಿಕನನ್ನಾಗಿಸುತ್ತದೆ. ಪ್ರತಿಯೊಬ್ಬ ನಾಗರಿಕನಿಗೂ ಶಿಕ್ಷಣ ಪಡೆಯುವ ಹಕ್ಕಿದೆ. ವಿದ್ಯಾರ್ಥಿಗಳು ಸುಶಿಕ್ಷಿತರಾದಾಗ ಆರೋಗ್ಯಪೂರ್ಣ ಸಮಾಜದ ನಿಮರ್ಾಣ ಸಾಧ್ಯವಾಗುತ್ತದೆ ಎಂದು ಎಸ್ವಿಎಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಪಾಂಡುರಂಗ ನಾಯಕ್ ಹೇಳಿದ್ದಾರೆ.
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ಹೊಸ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಶಾಲಿನಿ ಸ್ವಾಗತಿಸಿ, ಉಪನ್ಯಾಸಕ ರಿಯಾಝ್ ವಂದಿಸಿದರು. ಉಪನ್ಯಾಸಕ ಚೇತನ್ ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು.
