ಮಂಗಳೂರು: 70ರ ದಶಕದ ಖ್ಯಾತ ಬಾಲಿವುಡ್ ತಾರೆ ಸಲ್ಮಾನ್ ಖಾನ್ರ ಮಲತಾಯಿ ಹೆಲೆನ್ ನಿನ್ನೆ ಮಂಗಳೂರಿಗೆ ಆಗಮಿಸಿ ನಂತರ ಧರ್ಮಸ್ಥಳದತ್ತ ಪ್ರಯಾಣ ಬೆಳೆಸಿದರು.

ನಿನ್ನೆ ಮಂಗಳೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಹೆಲೆನ್ ಕೆಲಹೊತ್ತು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತ ನಾಡಿ ನಂತರ ತಮ್ಮ ಪ್ರಯಾಣ ಮುಂದುವರಿಸಿದರು. ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ಹೆಲೆನ್ ಕೆಲಸಮಯ ಕಳೆಯಲಿದ್ದಾರೆ ಎಂದು ತಿಳಿದುಬಂದಿದೆ.
