ಬಂಟ್ವಾಳ: ಭಾರತದ ಆಡಳಿತ ವ್ಯವಸ್ಥೆಯು ಪ್ರಜಾಪ್ರಭುತ್ವ ಮಾದರಿಯದ್ದು. ಪ್ರಜಾಪ್ರಭುತ್ವದ ನಿಜವಾದ ಆಶಯಗಳನ್ನು ಪ್ರತಿಯೊಬ್ಬ ಭಾರತೀಯನು ಅರ್ಥ ಮಾಡಿಕೊಳ್ಳಬೇಕಾಗಿದೆ. ರಾಜ್ಯಶಾಸ್ತ್ರವನ್ನು ಭೋದಿಸುವ ಅಧ್ಯಾಪಕ ಮತ್ತು ಕಲಿಯುವ ವಿದ್ಯಾರ್ಥಿಗಳು ಈ ಕುರಿತು ಹೆಚ್ಚಿನ ಆಸಕ್ತಿ ವಹಿಸುವುದು ಇಂದಿನ ಅಗತ್ಯವಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದ ಪ್ರಾಧ್ಯಾಪಕ ಡಾ| ಪಿ.ಎಲ್ ಧರ್ಮ ಹೇಳಿದರು.

DSC_0598
ಅವರು ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು ಬಂಟ್ವಾಳ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಜಂಟಿ ಆಶ್ರಯದಲ್ಲಿ ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನಲ್ಲಿ ನಡೆದ ಪ್ರಥಮ ಬಿ.ಎ ರಾಜ್ಯಶಾಸ್ತ್ರ ಪಠ್ಯ ವಿಷಯದ ಕುರಿತ ಕಾರ್ಯಗಾರವನ್ನು ಜು.4ರಂದು ಶನಿವಾರ  ಉದ್ಧಾಟಿಸಿ ಮಾತನಾಡಿದರು.

ದಿಕ್ಸೂಚಿ ಭಾಷಣ ಮಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಅಧ್ಯಕ್ಷರಾದ ಡಾ| ರಾಜರಾಂ ತೋಳ್ಪಾಡಿ ಇವರು ದಿಕ್ಸೂಚಿ ಭಾಷಣ ಮಾಡಿ ವಿದ್ಯಾರ್ಥಿಗಳು ರಾಜ್ಯಶಾಸ್ತ್ರ ವಿಷಯವನ್ನು ಐಚ್ಛಿಕವಾಗಿ ಓದಬೇಕಾದ ಇಂದಿನ ಅನಿವಾರ್ಯತೆಯನ್ನು ಕುರಿತು ವಿವರಿಸಿದರು.
ಎಸ್.ವಿ.ಎಸ್ ಕಾಲೇಜಿನ ಸಂಚಾಲಕರಾದ ಶ್ರೀ ಕೂಡಿಗೆ ಪ್ರಕಾಶ್ ಶೆಣೈ ಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಅಧ್ಯಾಪಕ ಸಂಘದ ಕಾರ್ಯದರ್ಶಿ  ಮತ್ತು ಕಾರ್ಯಗಾರದ ಸಂಯೋಜಕರಾದ ಪ್ರೊ. ನಾರಾಯಣ ಭಂಡಾರಿ ವಂದಿಸಿದರು. ಉಪನ್ಯಾಸಕಿ ಪ್ರೊ . ಪ್ರೇಮಲತಾ ಪೈ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿ ಲಿಖಿತಾ ಪ್ರಾರ್ಥಿಸಿದರು.

By Suddi9

Leave a Reply

Your email address will not be published. Required fields are marked *