ಬಂಟ್ವಾಳ: ಬಂಟ್ವಾಳ ಜಿಲ್ಲಾ ಗ್ಯಾರೇಜ್ ಮಾಲೀಕರ ಸಂಘದ ವತಿಯಿಂದ ಮಂಗಳೂರು ಎನಪೋಯ ಆಸ್ಪತ್ರೆ ತಜ್ಞ ವೈದ್ಯರಿಂದ ‘ಉಚಿತ ಹೃದಯ ಮತ್ತು ಮಧುಮೇಹ ತಪಾಸಣಾ ಶಿಬಿರವು ಇದೇ 26ರಂದು ಬಿ.ಸಿ.ರೋಡ್ ಸಮೀಪದ ಗಾಣದಪಡ್ಪು ಸಭಾಂಗಣದಲ್ಲಿ ನಡೆಯಲಿದೆ.
ಬಂಟ್ವಾಳ ತಾಲ್ಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಗ್ಯಾರೇಜ್ ಮಾಲೀಕರ ಸಂಘದ ಅಧ್ಯಕ್ಷ ಸುಧಾಕರ್ ಸಾಲಿಯಾನ್, ಬಂಟ್ವಾಳ ಎಎಸ್ಪಿ ರಾಹುಲ್ ಕುಮಾರ್, ಮಂಗಳೂರು ಗ್ಯಾರೇಜ್ ಮಾಲೀಕರ ಸಂಘದ ಅಧ್ಯಕ್ಷ ಪುರುಷೋತ್ತಮ, ತಜ್ಞ ವೈದ್ಯರಾದ ಡಾ. ಸಂತೋಷ್ ಬಾಬು, ಡಾ. ಹರೀಶ್ ಆರ್. ನಾಯರ್, ಡಾ.ಕೃಷ್ಣ ಶೆಟ್ಟಿ, ಡಾ.ರಾಹುಲ್ ಮತ್ತಿತರರು ಭಾಗವಹಿಸಲಿದ್ದಾರೆ.
