ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು ಬಂಟ್ವಾಳದ ಅರ್ಥಶಾಸ್ತ್ರ ವಿಭಾಗ, ವಾಣಿಜ್ಯಶಾಸ್ತ್ರ ವಿಭಾಗ ಮತ್ತು ಬಿ.ಬಿ.ಎಂ ವಿಭಾಗ ಹಾಗೂ ಮಂಗಳೂರು ವಿ.ವಿ.ಯ ಅರ್ಥಶಾಸ್ತ್ರ ಉಪನ್ಯಾಸಕರ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ “ಎಮರ್ಜಿಂಗ್ ಟ್ರೆಂಡ್ಸ್ ಇನ್ ಇಂಡಿಯನ್ ಬ್ಯಾಂಕಿಂಗ್ ಎಂಡ್ ಫೈನಾನ್ಸಿಯಲ್ ಇನ್‍ಕ್ಲೂಷನ್ “ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವು ಆಗಸ್ಟ್ 13 ಮತ್ತು 14,2015 ರಂದು ಎಸ್.ವಿ.ಎಸ್ ಕಾಲೇಜಿನಲ್ಲಿ ನಡೆಯಲಿದೆ.
ಮಂಗಳೂರು ವಿಶ್ವವಿದ್ಯಾನಿಲಯ ಆಡಳಿತ ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಡಾ| ಮಲ್ಲಿಕಾರ್ಜುನಪ್ಪ ಟಿ ಯವರು ವಿಚಾರ ಸಂಕಿರಣ ಉದ್ಘಾಟಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾಲೇಜಿನ ಸಂಚಾಲಕರಾದ ಶ್ರೀ ಕೂಡಿಗೆ ಪ್ರಕಾಶ್ ಶೆಣೈ ಅಧ್ಯಕ್ಷತೆ ವಹಿಸಲಿದ್ದಾರೆ.
ದಿನಾಂಕ 14.07.2015ರಂದು ಅಪರಾಹ್ನ ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್‍ರವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ನಿಟ್ಟೆಯ ಕೆ.ಎಸ್.ಹೆಗ್ದೆ ಮ್ಯಾನೇಜ್‍ಮೆಂಟ್ ಕಾಲೇಜಿನ ಎಸೋಸಿಯೇಟ್ ಪ್ರೊಫೆಸರ್ ಡಾ| ಸುಧೀರ್ ರಾಜ್ ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಬೆಂಗಳೂರಿನ ಕೆನರಾ ಬ್ಯಾಂಕಿನ ಉಪಮಹಾಪ್ರಬಂಧಕರಾದ ಜೆ. ಪಿ ಸಾಹುಕಾರ್, ಕಲ್ಲಿಕೋಟೆ ವಿ.ವಿ.ಯ ಕಾಮರ್ಸ್ ಮತ್ತು ಮ್ಯಾನೇಜ್‍ಮೆಂಟ್ ವಿಭಾಗ ಮುಖ್ಯಸ್ಥರಾದ ಡಾ| ಸತೀಶ್ ಇ ಕೆ, ಕಾರವಾರದ ಎಸ್.ಬಿ.ಎಂ ನ ಸಹಾಯಕ ಪ್ರಬಂಧಕರಾದ ಕೆ ನರಸಿಂಹ ಭಟ್, ಎಸ್ ವಿ ಎಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ ವಿ ರಘುನಂದನ್‍ವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು.
ವಿಚಾರ ಸಂಕಿರಣದಲ್ಲಿ ಭಾಗವಹಿಸುವ ಪ್ರತಿನಿಧಿಗಳಿಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ಔಔಆ ಸೌಲಭ್ಯ ನೀಡಲಾಗಿದೆ.

By Suddi9

Leave a Reply

Your email address will not be published. Required fields are marked *