ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ, ಸಮನ್ವಯ ಸಮಿತಿ ಅಂ. ಕೇಂದ್ರ ಮಯ್ಯರಬೈಲು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜಿಕಲ್ಲು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವು ಮಯ್ಯರಬೈಲು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಪಂಜಿಕಲ್ಲು ಪ್ರಾಥಮಿಕ ಆರೋಗ್ಯ ಕೆಂದ್ರದ ವೈದ್ಯಾಧಿಕಾರಿ ಡಾ| ರಾಮ್‍ರಾಜೇಶ್, ಹಿರಿಯ ಮೆಲ್ವಾಚಾರಿಕಿ ಗಾಯತ್ರಿ ಕಂಬಳಿ, ಆರೋಗ್ಯ ಕಾರ್ಯಕರ್ತೆ ಪಿ.ಎ.ರಾಧ ಮತ್ತು ಅಂಗನವಾಡಿ ಕಾರ್ಯಕರ್ತೆ ವಿಶಾಲಾಕ್ಷಿ ಉಪಸ್ಥಿತರಿದ್ದರು.
