ಬಂಟ್ವಾಳ; ಪತ್ರಕರ್ತರ ಸಂಘದ ರಜತವರ್ಷಾಚರಣೆ ಸಮಿತಿ ಬಂಟ್ವಾಳ, ಕಾರ್ಯನಿರತ ಪತ್ರಕರ್ತರ ಸಂಘ ಬಂಟ್ವಾಳ ತಾಲೂಕು ಹಾಗೂ ಪ್ರೆಸ್ ಕ್ಲಬ್ ಬಂಟ್ವಾಳ ಇದರ ಆಶ್ರಯದಲ್ಲಿ ರಜತ ವರ್ಷಾಚರಣೆ ಉದ್ಘಾಟನೆ ಹಾಗೂ ರಜತ ಲಾಂಛನ ಬಿಡುಗಡೆ ಕಾರ್ಯಕ್ರಮವು ಆ.24 ರಂದು ಸೋಮವಾರ ಬೆಳಿಗ್ಗೆ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ರಜತವರ್ಷಾಚರಣೆಗೆ ಚಾಲನೆ ನೀಡಲಿದ್ದು, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ರಜತ ಲಾಂಛನ ಬಿಡುಗಡೆ ಗೊಳಿಸುವರು. ಪತ್ರಕರ್ತರ ಸಂಘದ ರಜತವರ್ಷಾಚರಣೆ ಸಮಿತಿ ಗೌರವಾಧ್ಯಕ್ಷ ಪ್ರೊ.ಬಾಲಕೃಷ್ಣ ಗಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಆಶಾ ತಿಮ್ಮಪ್ಪ ಗೌಡ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಯಶವಂತ ದೇರಾಜೆ , ಪುರಸಭಾ ಅಧ್ಯಕ್ಷೆ ವಸಂತಿ ಚಂದಪ್ಪ ಬಂಟ್ವಾಳ ನಗರ ಯೋಜನಾಪ್ರಾಧಿಕಾರದ ಅಧ್ಯಕ್ಷ ಪಿಯೂಸ್ ರೋಡ್ರಿಗಸ್ , ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಡಾ.ರೊನಾಲ್ಡ್ ಅನಿಲ್ ಫೆರ್ನಾಂಡೀಸ್ ಮೊದಲಾದ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬಂಟ್ವಾಳದ ಎಲ್ಲಾ ಪತ್ರಕರ್ತರು, ಲೇಖಕರು, ಸಾಹಿತ್ಯಾಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಮಿತಿಯ ಅಧ್ಯಕ್ಷ ಇಬ್ರಾಹಿಂ ಅಡ್ಕಸ್ಥಳ ಹಾಗೂ ಪ್ರಧಾನ ಕಾರ್ಯದರ್ಶಿ ಸಂದೀಪ್ ಸಾಲ್ಯಾನ್ ತಿಳಿಸಿದ್ದಾರೆ.
