ಬಂಟ್ವಾಳ: ಎಸ್. ವಿ.ಎಸ್. ಕಾಲೇಜಿನ ರಾಷ್ಟೀಯ ಸೇವಾ ಯೋಜನೆಯ ಆಶ್ರಯದಲ್ಲಿ ವಿಶ್ವ ತಂಬಾಕು ದಿನ ವನ್ನು ಕಾಲೇಜಿನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ/ಜಾನ್ ಕೆನಡಿ ಆಗಮಿಸಿ ತಂಬಾಕು ವಸ್ತುಗಳ ಬಳಕೆ ಹಾಗೂ ಆರೋಗ್ಯದ ಮೇಲಾಗುವ ದುಷ್ಪಾರಿಣಾಮಗಳು ಹಾಗೂ ಅಔಖಿಕಂ -2003 ಕಾಯಿದೆಯ ಕುರಿತು ಮಾಹಿತಿಯನ್ನು ನೀಡಿದರು .

ಬಂಟ್ವಾಳ ನಗರಠಾಣೆಯ ಸಬ್ಇನ್ಸ್ಪೆಕ್ಟರ್ ಶ್ರೀ ನಂದಕುಮಾರ್ ಮಾತನಾಡುತ್ತಾ ತಂಬಾಕು, ಬೀಡಿ, ಸಿಗರೇಟು ಸೇದುವವರ ವಿರುದ್ದ ತೆಗೆದುಕೊಳ್ಳಲಾಗುವ ಶಿಸ್ತಿನ ಕ್ರಮಗಳ ಕುರಿತು ವಿವರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್ ಅಧ್ಯಕ್ಷತೆ ವಹಿಸಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವನ್ನು ಮೂಡಿಸುವಲ್ಲಿ ವಿದ್ಯಾರ್ಥಿಗಳು ಕಾರ್ಯಪ್ರವೃತ್ತರಾಗುವಂತೆ ಕರೆಕೊಟ್ಟರು. ವೇದಿಕೆಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀ ರಾಜಶೇಖರ್, ಶ್ರೀ ಪ್ರವೀಣ್ ರಾವ್ ಉಪಸ್ಥಿತರಿದ್ದರು. ಯೋಜನಾಧಿಕಾರಿ ಶ್ರೀ ಕಿಟ್ಟು ರಾಮಕುಂಜ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಬಂಟ್ವಾಳ ನಗರ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು
