ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾ.ಪಂ.ವ್ಯಾಪ್ತಿಯ ಶಂಭೂರು ಪಡಿತರ ವಿತರಣೆ ಕೇಂದ್ರವನ್ನು ಬೇರೆಡೆಗೆ ಸ್ಥಳಾಂತರಗೊಳಿಸದಂತೆ ಆಗ್ರಹಿಸಿ ಇಲ್ಲಿನ ಸ್ಥಳೀಯರು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಇವರಿಗೆ ಮಂಗಳವಾರ ಮನವಿ ಸಲ್ಲಿಸಿದ್ದಾರೆ.
ಶಂಭೂರು ಗ್ರಾಮದಲ್ಲಿ ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘದ ವತಿಯಿಂದ ಸುಮಾರು ಇಪ್ಪತ್ತೊಂಭತ್ತು ವರ್ಷದಿಂದ ಪಡಿತರ ಆಹಾರ ಸಾಮಾಗ್ರಿ ವಿತರಿಸಲಾಗುತ್ತಿದ್ದು, ಇದೀಗ ಏಕಾಯೇಕಿ ಪಂಚಾಯಿತಿನ ಗ್ರಂಥಾಲಯ ಕಟ್ಟಡದಲ್ಲಿ ವಿತರಣೆ ಮಾಡುತ್ತಿದ್ದಾರೆ.
ಇದರಲ್ಲಿ ಕೆಲವೊಂದು ಸ್ವಹಿತಾಸಕ್ತಿ ಹೊಂದಿರುವ ಗ್ರಾಮ ಪಂಚಾಯಿತಿ ಸದಸ್ಯರು ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಇದೇ 1ರಂದು ಏಕಾಯೇಕಿ ನಿರ್ಣಯ ಕೈಗೊಂಡು ಪಡಿತರ ಕೇಂದ್ರ ಸ್ಥಳಾಂತರಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.
ತಾ.ಪಂ. ಮಾಜಿ ಉಪಾಧ್ಯಕ್ಷರಾದ ಆನಂದ ಎ.ಶಂಭೂರು ಮತ್ತು ದಿನೇಶ್ ಅಮ್ಟೂರು ಸಹಿತ ಅಪಾರ ಮಂದಿ ಮಹಿಳೆಯರು ಪಾಲ್ಗೊಂಡಿದ್ದರು.

By Suddi9

Leave a Reply

Your email address will not be published. Required fields are marked *