ಮೂಡುಬಿದರೆ : ಆಲ್‍ಕಾರ್ಗೋ ಲಾಜಿಸ್ಟಿಕ್ ಲಿಮಿಟೆಡ್‍ನ ಅಗತ್ಯಾ ಫೌಂಡೇಶನ್ ವತಿಯಿಂದ ಆಳ್ವಾಸ್‍ನ ವಿವಿಧ ಕಾಲೇಜುಗಳ 116 ವಿದ್ಯಾರ್ಥಿಗಳಿಗೆ 3.39 ಲಕ್ಷ ರೂಗಳ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು.
ಕಂಪನಿಯ ಮಂಗಳೂರು ಶಾಖೆಯ ಪ್ರಬಂಧಕ ನಕ್ರೆ ಸುರೇಂದ್ರ ಶೆಟ್ಟಿ ಶುಕ್ರವಾರ ವಿದ್ಯಾಗಿರಿಯಲ್ಲಿ ವಿತರಿಸಿದರು.
mbd_oct2_10ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು ಬಡವರೆಂಬ ಕೀಳರಿಮೆಯನ್ನು ಬೆಳೆಸಿಕೊಳ್ಳದೆ ಉತ್ತಮ ಅಂಕಗಳಿಸುವ ಮೂಲಕ ಸಾಧಕರಾಗಬೇಕು. ಬಡ, ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಉತ್ತೇಜನ ನೀಡುವ ಉದ್ದೇಶದಿಂದ ಕಂಪನಿಯು ಕಳೆದ 5 ವರ್ಷಗಳಿಂದ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಈ ಶೈಕ್ಷಣಿಕ ವರ್ಷದಲ್ಲಿ ಅವಿಭಜಿತ ದ.ಕ ಜಿಲ್ಲೆಯ 2230 ವಿದ್ಯಾರ್ಥಿಗಳಿಗೆ 71ಲಕ್ಷ ರೂ ವಿದ್ಯಾರ್ಥಿ ವೇತನ ನೀಡಲಾಗಿದೆ ಎಂದು ಹೇಳಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಆಲ್‍ಕಾರ್ಗೋ ಕಂಪನಿಯಿಂದ ನೀಡುವ ವಿದ್ಯಾರ್ಥಿ ವೇತನಕ್ಕೆ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತದೆ. ವಿದ್ಯಾರ್ಥಿಗಳಲ್ಲಿ ಆಗಾಧವಾದ ಪ್ರತಿಭೆ ಸಾಮಥ್ರ್ಯವಿದ್ದು ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದರು.
ಕಟೀಲು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಉದಯ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *