ಬಂಟ್ವಾಳ : ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಸಭೆಯು ಇತ್ತೀಚೆಗೆ ಬಿ.ಸಿ.ರೋಡ್ ನಲ್ಲಿ ಜರಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಅಲಿ ಯವರು ಮುಂದಿನ ದಿನಗಳು ಕಾಂಗ್ರೆಸ್ ನಿಂದ ಪರಂಪರಾಗತವಾಗಿ ಚದುರಿಹೋದ ಮತಗಳು ಸೇರಿಸಿ ಕಾಂಗ್ರೆಸ್ ನ್ನು ಜಿಲ್ಲಾ ಮತ್ತು ತಾಲೂಕು ಪಂಚಾಯತ್ ನಲ್ಲಿ ಬಹುಮತ ಬರುವಂತೆ ಮಾಡಬೇಕೆಂದರು.
KAR_2514ಸಭೆಯನ್ನು ಉದ್ದೇಶಿಸಿ ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷರಾದ ಎಂ.ಎಸ್.ಮಹಮ್ಮದ್ ಮಾತನಾಡಿ ಕಾಂಗ್ರೆಸ್ಸನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಪಡಿಸಬೇಕೆಂದು ಹೇಳಿದರು. ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಬೂತ್ ಮಟ್ಟದಿಂದ ಮತ್ತೆ ಕಾಂಗ್ರೆಸ್ ನ್ನು ಸಂಘಟಿಸಬೇಕೆಂದರು.
ಸಭೆಯಲ್ಲಿ ಬಂಟ್ವಾಳ ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್ , ತಾ.ಪಂ.ಸದಸ್ಯ ಪದ್ಮಶೇಖರ್ ಜೈನ್, ಪಾಣೆ ಮಂಗಳೂರು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಲ್ಬರ್ಟ್ ಮೆನೆಜಸ್, ಯು ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಅಲ್ಪಸಂಖ್ಯಾತ ಪದಾಧಿಕಾರಿ ಅಬ್ದುಲ್ ಜಲೀಲ್ ಕರೋಪಾಡಿ , ಉಮ್ಮರ್ ಪಜೀರ್ ಉಪಸ್ಥಿತರಿದ್ದರು. ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಪ್ರಧಾನ ಕಾರ್ಯದರ್ಶಿ ಹಂಝ ಮಂಚಿ ಸ್ವಾಗತಿಸಿದರು. ಕೋಶಾಧಿಕಾರಿ ಇಬ್ರಾಹಿಂ ರ ಶೀದ್ ವಂದಿಸಿ ಕಾರ್ಯಕ್ರಮ ನಿರ್ವಹಿಸಿದರು.

By Suddi9

Leave a Reply

Your email address will not be published. Required fields are marked *