ಬಂಟ್ವಾಳ:ರಾಜ್ಯದಲ್ಲಿ ಪದವಿಪೂರ್ವ ಕಾಲೇಜು ಉಪನ್ಯಾಸಕರು ಮತ್ತು ಪ್ರಾಚಾರ್ಯರ ವೇತನ ತಾರತಮ್ಯ ಸರಿಪಡಿಸುವ ನಿಟ್ಟಿನಲ್ಲಿ ಕೂಡಲೇ ಕುಮಾರ ನಾಯಕ್ ಆಯೋಗ ವರದಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಚಾರ್ಯರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಮತ್ತು ಅಪರ ಜಿಲ್ಲಾಧಿಕಾರಿ ಕುಮಾರ್ ಇವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

10btl-Manavi
ಕಳೆದ 1996ರಲ್ಲಿ ಪದವಿ ಶಿಕ್ಷಣದಿಂದ ಪದವಿಪೂರ್ವ ಶಿಕ್ಷಣವನ್ನು ಬೇರ್ಪಡಿಸಿದಾಗ ಪದವಿಪೂರ್ವ ಉಪನ್ಯಾಸಕರು ಮತ್ತು ಪ್ರಾಚಾರ್ಯರ ವೇತನದಲ್ಲಿ ಭಾರೀ ತಾರತಮ್ಯ ಉಂಟಾಗಿತ್ತು. ಈ ಬಗ್ಗೆ ಕಳೆದ 20 ವರ್ಷಗಳಿಂದಲೂ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ರೀತಿಯ ಸ್ಪಂದನೆ ದೊರೆತಿಲ್ಲ ಎಂದು ಅವರು ಮನವಿಯಲ್ಲಿ ಆರೋಪಿಸಿದ್ದಾರೆ.
ಸಂಘದ ಜಿಲ್ಲಾಧ್ಯಕ್ಷೆ ಸರಸ್ವತಿ ಬಿ., ಕಾರ್ಯದರ್ಶಿ ವಿಠಲ್, ಕೋಶಾಧಿಕಾರಿ ಗಂಗಾಧರ ಆಳ್ವ ಮತ್ತಿತರರು ಇದ್ದರು.
—

By Suddi9

Leave a Reply

Your email address will not be published. Required fields are marked *