ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟರ್ಸ್ ಮೈದಾನದಲ್ಲಿ ಇಲ್ಲಿನ ಶ್ರೀ ದುರ್ಗಾ ಪರಮೇಶ್ವರಿ ಸೇವಾ ವೃಂದದ ವತಿಯಿಂದ ಇದೇ 6ರಂದು ರಾತ್ರಿ ಕಟೀಲು ಶ್ರೀ ದುರ್ಗಾಪರಮೆಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ‘ಕುಮಾರ ವಿಜಯ’ ಎಂಬ 24ನೇ ವರ್ಷದ ಯಕ್ಷಗಾನ ಬಯಲಾಟ ನಡೆಯಲಿದೆ.
ಅಂದು ಬೆಳಿಗ್ಗೆ ರಾಯಿ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ವತಿಯಿಂದ ರಾಯಿ ಅಶ್ವತ್ಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
