ಮೂಡುಬಿದಿರೆ: ಕಾಂಗ್ರೆಸ್-ಬಿಜೆಪಿ ಪಕ್ಷಗಳಿಗೆ ತೀವ್ರ ಸ್ಪರ್ಧೆಯಿರುವ ಪುತ್ತಿಗೆ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಮೂರು ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.
ಸಾಮಾನ್ಯ ಪುರುಷ ಮೀಸಲಾತಿಯಿರುವ ಪುತ್ತಿಗೆ ಕ್ಷೇತ್ರದಿಂದ ಕಾಂಗ್ರೆಸ್, ಜೆಡಿಎಸ್, ಬಿಜೆಪಿ, ಸಿಪಿಎಂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಪರಿಶಿಷ್ಟ ಜಾತಿ ಮಹಿಳೆ ಮೀಸಲಾತಿಯನ್ನು ಹೊಂದಿರುವ ಶಿರ್ತಾಡಿಯಲ್ಲಿ ಸಿಪಿಎಂ, ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು ಕಣದಲ್ಲಿದ್ದು, ಜೆಡಿಎಸ್ ಅಭ್ಯರ್ಥಿಯ ಆಯ್ಕೆ ಮಾಡಿಲ್ಲ.
Untitled-1 copy
ಪುತ್ತಿಗೆ ಕ್ಷೇತ್ರದ ಅಭ್ಯರ್ಥಿಗಳು: ಪ್ರತಿಷ್ಠಿತ ಕ್ಷೇತ್ರವೆಂದು ಕರೆಸಿಕೊಳ್ಳುವ ಪುತ್ತಿಗೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತೀವ್ರ ಸ್ಪರ್ಧೆಯಿದ್ದರೂ, ಜೆಡಿಎಸ್ ಹಾಗೂ ಸಿಪಿಎಂ ಪಕ್ಷಗಳು ಪೈಪೋಟಿ ನೀಡುವ ಸಂಭವಿದೆ. ಹಿಂದೆ ದ.ಕ ಜಿ.ಪಂ ಅಧ್ಯಕ್ಷರಾಗಿದ್ದ(ಅಂದು ಜೆಡಿಎಸ್) ಕೆ.ಪಿ ಸುಚರಿತ ಶೆಟ್ಟಿ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಯುವ ಕಾಂಗ್ರೆಸ್ ಮುಖಂಡ ಚಂದ್ರಹಾಸ ಸನಿಲ್ ಕಾಂಗ್ರೆಸ್‍ನ ಅಭ್ಯರ್ಥಿಯಾಗಿದ್ದು, ಜಿ.ಪಂ ಚುನಾವಣೆಗೆ ಇದೇ ಮೊದಲ ಬಾರಿ ಸ್ಪರ್ಧಿಸುತ್ತಿದ್ದಾರೆ. ಕಾರ್ಮಿಕ ಮುಖಂಡ ಯಾದವ ಶೆಟ್ಟಿ ಸಿಪಿಎಂನಿಂದ ಕಣಕ್ಕಿಳಿದಿದ್ದು, ಉಳಿದ ಪಕ್ಷಗಳು ಅಭ್ಯರ್ಥಿ ಘೋಷಣೆ ಮಾಡುವ ಮೊದಲೇ ಪ್ರಚಾರ ಕಾರ್ಯಹಮ್ಮಿಕೊಂಡಿದ್ದಾರೆ. ಜೆಡಿಎಸ್ ಮುಖಂಡ ತೋಡಾರು ದಿವಾಕರ ಶೆಟ್ಟಿ ಜೆಡಿಎಸ್‍ನಿಂದ ಸ್ಪರ್ಧಿಸುತ್ತಿದ್ದಾರೆ.

By Suddi9

Leave a Reply

Your email address will not be published. Required fields are marked *