ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ದಕ್ಷ ಅಧಿಕಾರಿ ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣ ಸಿಬಿಐಗೆ ತನಿಕೆಗೆ ಒಪ್ಪಿಸುವಂತೆ ಹಾಗೂ ಪ್ರಕರಣದಲ್ಲಿ ಹೆಸರಿಸಲಾದ ಸಚಿವ ಅಧಿಕಾರಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಬಿಸಿರೋಡ್ ಪ್ಳೈಒವರ್ ಕೆಳಗೆ ಪ್ರತಿಭಟನೆ ನಡೆಸಿದರು. ಬಳಿಕ ತಹಶೀಲ್ದಾರ್ ಪುರಂದರ ಹೆಗ್ಡೆ ಅವರಿಗೆ ಮನವಿ ನೀಡಲಾಯಿತು.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ದಕ್ಷ ಅಧಿಕಾರಿಗಳನ್ನು ಬೇರೆ ಬೇರೆ ರೂಪದಲ್ಲಿ ಕಳೆದುಕೊಳ್ಳುತ್ತಿದ್ದೇವೆ, ಆದರೂ ಸರಕಾರ ಎಚ್ಚೆತ್ತುಕೊಂಡಿಲ್ಲ. ಸರಕಾರದ ಸಚಿವ ಸ್ಥಾನದಲ್ಲಿರುವ ಮತ್ತು ಅಧಿಕಾರಿಗಳ ಹೆಸರುಗಳನ್ನು ಉನ್ನತ ಮಟ್ಟದ ಅಧಿಕಾರಿಗಳು ಉಲ್ಲೇಖಿಸಿ ಆತ್ಮಹತ್ಯೆ ಮತ್ತು ಅಸಹಜ ಸಾವುಗಳು ನಡೆದರೂ ಪ್ರಕರಣದ ಗಂಬೀರತೆಯನ್ನು ಅರಿತುಕೊಂಡಿಲ್ಲ. ಒಟ್ಟಿನಲ್ಲಿ ಸರಕಾರ ನಿದ್ದೆಯಿಂದ ಹೊರಬಂದಿಲ್ಲ, ಕಾನೂನು ಸುವ್ಯವಸ್ಥೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಶಾಸಕ ಎ.ರುಕ್ಮಯ ಪುಜಾರಿ ಹೇಳಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಪ್ರಮುಖರಾದ ಪದ್ಮನಾಭ ಕೊಟ್ಟಾರಿ, ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು, ತುಂಗಪ್ಪ ಬಂಗೇರ, ಕಮಲಾಕ್ಷಿ ಕೆ.ಪೂಜಾರಿ, ಜಿ ಆನಂದ, ದೇವದಾಸ ಶೆಟ್ಟಿ, ರಾಮ್‍ದಾಸ ಬಂಟ್ವಾಳ, ದಿನೇಶ್ ಅಮ್ಟೂರು, ಆನಂದ ಶಂಭೂರು, ಚೆನ್ನಪ್ಪ ಕೋಟ್ಯಾನ್, ಗೋವಿಂದ ಪ್ರಭು ಮತ್ತಿತರರು ಉಪಸ್ಥಿತರಿದ್ದರು.

