ಬಂಟ್ವಾಳ:ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಆಲ್ಟೊ ಕಾರೊಂದು ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಬಂಟ್ವಾಳ ತಾಲ್ಲೂಕಿನ ಮಹಿಳೆಯೊಬ್ಬರು ಮೃತಪಟ್ಟು ಮೂವರು ಮಕ್ಕಳ ಸಹಿತ ಐವರು ಗಾಯಗೊಂಡ ಘಟನೆ ಸೋಮವಾರ ಮುಂಜಾನೆ ನಡೆದಿದೆ.
ಮೃತರನ್ನು ಇಲ್ಲಿನ ನಂದಾವರ ಮಸೀದಿ ಬಳಿ ನಿವಾಸಿ ಹಸನಬ್ಬ ಎಂಬವರ ಪುತ್ರಿ ಮುಮ್ತಾಝ್(30) ಎಂದು ಗುರುತಿಸಲಾಗಿದೆ. ಉಳಿದಂತೆ ಮುಮ್ತಾಝ್‍ಳ ತಂದೆ ಹಸನಬ್ಬ, ಪತಿ ಝಹೀರ್, ಮಕ್ಕಳಾದ ರಿಝ್ವಾನ್ ಮುನಾಫ್, ಆಶಿಕ್ ಅಹ್ಮದ್, ಮುನೈಝಾ ಗಾಯಗೊಂಡು ಪುತ್ತೂರು ಆಸ್ಪತ್ರೆಗೆ ದಾಖಲಿಸಿಸಲಾಗಿದೆ.
ನಂದಾವರದಿಂದ ಶನಿವಾರ ಬೆಂಗಳೂರಿಗೆ ಹೊರಟಿದ್ದ ಇವರು ಸೋಮವಾರ ರಾತ್ರಿ ವಾಪಸ್ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಪುತ್ತೂರು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ವಾರಿಸುದಾರರಿಗೆ ಒಪ್ಪಿಸಲಾಗಿದ್ದು, ಸೋಮವಾರ ಸಂಜೆ ನಂದಾವರ ಮಸೀದಿ ಬಳಿ ಮೃತರ ಅಂತ್ಯಕ್ರಿಯೆ ನಡೆಯಿತು.

By Suddi9

Leave a Reply

Your email address will not be published. Required fields are marked *