ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಹಿಂದೆ ಅಭಿವೃದ್ದಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನಡೆಸಿದ ಬಳಿಕ ಅಭಿವೃದ್ದಿ ಪರಿಶೀಲನೆ ನಡೆಸಿದ್ದು ಸಾಕಷ್ಟು ಕಾರ್ಯಗಳು ಪ್ರಗತಿಯಲ್ಲಿದೆ. ಮುಂದಿನ ಎರಡು ಮೂರು ತಿಂಗಳೊಳಗಾಗಿ ಬಹುತೇಕ ಕಾಮಗಾರಿಗಳು ಲೋಕಾರ್ಪಣೆ ಗೊಳ್ಳಲಿದೆ ಎಂದು ತಿಳಿಸಿದರು.ಪುರಸಭಾ ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿರುವ ಒಳಚರಂಡಿ ಯೋಜನೆಯನ್ನು ಮತ್ತೆ 68 ಕೋಟಿ ಅನುದಾನದಲ್ಲಿ ಮುಂದುವರಿಸುವ ಕುರಿತಾಗಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ, ಬಂಟ್ವಾಳ ಪುರಸಭೆಯನ್ನು ನಗರ ಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಕುರಿತಾಗಿ ತೀರ್ಮಾನಿಸಲಾಗಿದ್ದು, ಕ್ಯಾಬಿನೆಟ್ ನಲ್ಲಿ ಆಂಗೀಕರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. 2 ಕೋಟಿ ರೂ ವೆಚ್ಚದ ಪಾಲಿಟೆಕ್ನಿಕ ಕಾಲೇಜಿನ ಸಂಪರ್ಕ ರಸ್ತೆಗೆ ಟೆಂಡರ್ ಕರೆಯಲಾಗಿದೆ.25

ರಾಜ್ಯ ಹೆದ್ದಾರಿ ಅಭಿವೃದ್ದಿ ಯೋಜನೆಯಡಿ ಗ್ರಾಮೀಣ ರಸ್ತೆಗಳ ಅಭಿವೃದ್ದಿಯಾಗುತ್ತಿದ್ದು, ಬಿ.ಸಿ.ರೋಡಿನ ವಾಹನದಟ್ಟಣೆ ನಿಯಂತ್ರಿಸುವ ಸಲುವಾಗಿ ಕಾಮಾಜೆ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯ ಮೂಲಕ ಪ್ರಸ್ತಾವನೆ ಕಳುಹಿಸಲಾಗುವುದು . ಬಹುಗ್ರಾಮ ಕುಡಿಯುವ ನೀರಿನ ಎರಡು ಯೋಜನೆಗಳು ಮುಕ್ತಾಯದ ಹಂತದಲ್ಲಿದೆ. ಮೆಟ್ರಿಕ್ ಪೂರ್ವ ಹಾಸ್ಟೆಲ್ ನಿರ್ಮಾಣಕ್ಕೆ ಜಮೀನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ. ಬಿ.ಸಿ.ರೋಡು ಮುಖ್ಯ ವೃತ್ತದ ಬಳಿಯಿಂದ ಗೂಡಿನ ಬಳಿವರೆಗೆ ವಾಕಿಂಗ್ ಝೋನ್ ನಿರ್ಮಿಸಲು ಯೋಜಿಸಲಾಗಿದೆ ಎಂದರು.
ಈ ಸಂದರ್ಭ ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಎಂ.ಎಸ್.ಮಹಮ್ಮದ್, ಪದ್ಮಶೇಖರ ಜೈನ್, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಬೂಡಾ ಅಧ್ಯಕ್ಷ ಪಿಯೂಸ್ ರೋಡ್ರಿಗಸ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ತಾ.ಪಂ.ಸದಸ್ಯರಾದ ಪ್ರಭಾಕರ ಪ್ರಭು, ಸಂಜೀವ ಪೂಜಾರಿ ಹಾಗೂ ಪುರಸಭಾ ಸದಸ್ಯರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *