ಬಂಟ್ವಾಳ:ಬಂಟ್ವಾಳ ಕಸ್ಬಾ ಗ್ರಾಮದ ಲೆಕ್ಕೆಸಿರಿಪಾದೆ ನಿವಾಸಿ, ಪ್ರಸಿದ್ಧ ಸ್ಯಾಕ್ಸೋಫೋನ್ ವಾದಕ ಬಂಟ್ವಾಳ ಜಯರಾಮ ಸಪಲ್ಯ (67) ಇವರು ಅಸೌಖ್ಯದಿಂದ ಶುಕ್ರವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ ಮತ್ತು ಮೂವರು ಪುತ್ರರು ಇದ್ದಾರೆ. ಬಂಟ್ವಾಳ ತಿರುಮಲ ವೆಂಕಟರಮಣ ಸ್ವಾಮಿ ದೇವಳದಲ್ಲಿ ಖಾಯಂ ನಾದಸ್ವರ ವಾದಕರಾಗಿದ್ದ ಇವರು ಕಳೆದ 35 ವರ್ಷಗಳಿಂದ ಜಿಲ್ಲೆಯಾದ್ಯಂತ ವಿವಿಧ ದೇವಸ್ಥಾನಗಳಲ್ಲಿ ಸ್ಯಾಕ್ಸೋಫೋನ್‍ವಾದಕರಾಗಿದ್ದರು. ಬೆಂಗಳೂರು, ಮೈಸೂರು, ಕೇರಳ ಮತ್ತಿತರ ಕಡೆಗಳಲ್ಲಿ ಸ್ಯಾಕ್ಸೋಫೋನ್ ವಾದನ ಮೂಲಕ ಅಪಾರ ಮಂದಿ ಅಭಿಮಾನಿಗಳನ್ನು ಹೊಂದಿದ್ದರು.
