ಬಂಟ್ವಾಳ: ತಾಲ್ಲೂಕಿನ ಚಿಣ್ಣರಲೋಕ ಮೋಕೆದ ಕಲಾವಿದೆರ್ ಟ್ರಸ್ಟ್ ಮತ್ತು ತುಳು ನಾಟಕೋತ್ಸವ ಸಮಿತಿ ವತಿಯಿಂದ ಬಡ್ಡಕಟ್ಟೆಯಲ್ಲಿ ಈಚೆಗೆ ಆರಂಭಗೊಂಡ ಒಂದು ವಾರಗಳ ತುಳು ನಾಟಕೋತ್ಸವ ಸ್ಪರ್ಧೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.
ಸಮಿತಿ ಗೌರವಾಧ್ಯಕ್ಷ ಸುದರ್ಶನ ಜೈನ್, ಅಧ್ಯಕ್ಷ ಸುಭಾಶ್ಚಂದ್ರ ಜೈನ್, ಟ್ರಸ್ಟ್ ಸಂಚಾಲಕ ಮೋಹನದಾಸ ಕೊಟ್ಟಾರಿ, ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಬೂಡ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್, ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ, ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್ ಮತ್ತಿತರರು ಇದ್ದಾರೆ

