ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೆಡ್‍ಕ್ರಾಸ್ ಘಟಕದ ಸಹಯೋಗದೊಂದಿಗದಲ್ಲಿ ‘ಸಮಾಜ ಸೇವೆ ಮತ್ತು ಯುವಜನತೆ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು.
ಉಡುಪಿಯ ಪುನರ್ನವ ಪ್ರಕೃತಿ ಚಿಕಿತ್ಸಕ ಡಾ. ತನ್ಮ ಗೋಸ್ವಾಮಿ ಸಂಪನ್ಮೂ ವ್ಯಕ್ತಿಯಾಗಿ ಭಾಗವಹಿಸಿ, ಆಧುನಿಕತೆಯ ಭರಾಟೆಯಲ್ಲಿ ತಮ್ಮತನವನ್ನು ಕಳೆದುಕೊಂಡಿರುವ ಈಗಿನ ಯುವಜನತೆ, ಸಮಾಜಕ್ಕೆ ತನ್ನ ಕೊಡುಗೆಗಳನ್ನೀಯುವುದನ್ನು ಮರೆತಿದೆ. ಯುವಜನತೆ ತಮ್ಮತನವನ್ನು ಉಳಿಸಿಕೊಂಡು ಆತ್ಮವಿಶ್ವಾಸದಿಂದ ಮುನ್ನುಗ್ಗಿ, ಸಮಾಜಕ್ಕೆ ತನ್ನ ಕೊಡುಗೆಗಳನ್ನಿತ್ತಾಗ ಮಾತ್ರ ಬದಲಾವಣೆ ಸಾಧ್ಯ. ಸ್ವಾರ್ಥರಹಿತ ಯುವಜನತೆಯಿಂದ ಮಾತ್ರ ಸಮಾಜ ಅಭಿವೃದ್ಧಿಯ ಪಥದಲ್ಲಿ ಸಾಗಬಹುದು ಎಂದು ಅಭಿಪ್ರಾಯಪಟ್ಟರು.

ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ. ಅಜಾದ್ ಅಹ್ಮದ್ ಅಧ್ಯಕ್ಷತೆ ವಹಿಸಿದ್ದರು. ಪದವಿ ಎನ್‍ಎಸ್‍ಎಸ್. ಘಟಕದ ಅಧಿಕಾರಿ ಸಂದೇಶ್ ಪಿ., ರೆಡ್‍ಕ್ರಾಸ್ ಘಟಕದ ಅಧಿಕಾರಿ ಡಾ. ಜಯಲಕ್ಷ್ಮಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಹರೀಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜೋಸ್ಲಿನ್ ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ.ಚಿನ್ನಸ್ವಾಮಿ ಅತಿಥಿಗಳನ್ನು ಪರಿಚಯಿಸಿ, ಪ್ರಾಸ್ತಾವಿಕ ಮಾತನಾಡಿದರು. ವಸುಧಾ ಭಟ್ ಕಾರ್ಯಕ್ರಮ ನಿರೂಪಿಸಿದರು. ಅಭಿಷೇಕ್ ವಂದಿಸಿದರು.
