ಮಂಗಳೂರು: ಮಂಗಳೂರಿನ ರಿಕ್ಷಾ ಪಾರ್ಕ್ನಿಂದ ಆ. 26 ಶುಕ್ರವಾರದಂದು ಪ್ರಯಾಣಿಕರೊರ್ವ ಪ್ರತಾಪ್ ಶೆಟ್ಟಿ ಅವರ ರಿಕ್ಷದಲ್ಲಿ ಪ್ರಯಾಣಿಸುವಾಗ ತಮ್ಮ ರಿಕ್ಷಾದಲ್ಲಿ ಬಿಟ್ಟುಹೋದ 5 ಲಕ್ಷ ಮೌಲ್ಯದ ಚಿನ್ನಾಭರಣ ಬ್ಯಾಗನ್ನು ಹಿಂದಿರುಗಿಸಿ ಪ್ರಾಮಾಣಿಕತೆಯನ್ನು ಮೆರೆದಿದ್ದ ಪ್ರತಾಪ್ ಶೆಟ್ಟಿ ಅವರಿಗೆ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಕೂಟಕ್ಕಳ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಪ್ರತಾಪ್ ಶೆಟ್ಟಿ ಅವರನ್ನು ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯಿಂದ ಸನ್ಮಾನಿಸಲಾಯಿತು. ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ಎಲ್ ನಾಯಕ್ ಅವರು ಶಾಲೂ ಹೊದಿಸಿ, ನಗದು ಮತ್ತು ಫಲಪುಷ್ಪಗಳನ್ನು ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಉಷಾಪ್ರಭಾ ಎನ್ ನಾಯಕ್, ಟ್ರಸ್ಟಿ ಉಸ್ತಾದ್ ರಫೀಕ್ ಖಾನ್, ಕಾಲೇಜಿನ ಹಳೆ ವಿದ್ಯಾರ್ಥಿ ಅಂಕುಶ್ ಎನ್ ನಾಯಕ್, ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಮಚಂದ್ರ ಭಟ್, ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕಿ ನೀಹಾ ಶೇಖ್ ಮತ್ತು ಇತರರು ಉಪಸ್ಥಿತರಿದ್ದರು.
