ಮೂಡುಬಿದಿರೆ: ದ.ಕ ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಹಾಗೂ ಸರ್ಕಾರಿ ಪ್ರೌಢಶಾಲೆ ದರೆಗುಡ್ಡೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಜಿಲ್ಲಾ ಮಟ್ಟದ ಪ್ರಾಥಮಿಕ & ಪ್ರೌಢಶಾಲಾ ವಿಭಾಗದ ಬಾಲಕರ ಮತ್ತು ಬಾಲಕಿಯರ ವಿಭಾಗದ ಬಾಲ್‍ಬ್ಯಾಡ್ಮಿಂಟನ್ ಪಂದ್ಯಾಟವು ಮೂಡುಬಿದಿರೆ ಸಮೀಪದ ದರೆಗುಡ್ಡೆ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆಯಿತು. 
ನೆಲ್ಲಿಕಾರು ತಾ. ಪಂ. ಸದಸ್ಯೆ ರೇಖಾ ಸಾಲ್ಯಾನ್ ಪಂದ್ಯಾಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಶಿರ್ತಾಡಿ ಜಿ. ಪಂ ಸದಸ್ಯೆ ಸುಜಾತ ಕೆ.ಪಿ ಅಧ್ಯಕ್ಷತೆ ವಹಿಸಿದ್ದರು. ದರೆಗುಡ್ಡೆ ಗ್ರಾ.ಪಂ ಉಪಾಧ್ಯಕ್ಷ ಮುನಿರಾಜ ಹೆಗ್ಡೆ, ಸದಸ್ಯರಾದ ಸುಭಾಶ್ಚಂದ್ರ ಚೌಟ, ಜಯಶೆಟ್ಟಿ, ಹರೀಶ್ ಅತಿಥಿಗಳಾಗಿ ಭಾಗವಹಿಸಿದ್ದರು. ದೈ. ಶಿ. ಶಿ. ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ, ಪ್ರಭಾರ ಶಿಕ್ಷಣಾಧಿಕಾರಿ ಬಿ. ರಾಜಶ್ರೀ. ಎಸ್‍ಡಿಎಂಸಿ ಅಧ್ಯಕ್ಷ ಭಾಸ್ಕರ್, ಶಾಲಾ ಮುಖ್ಯ ಶಿಕ್ಷಕಿ ಅನ್ನಪೂರ್ಣೇಶ್ವರಿ ಉಪಸ್ಥಿತಿದ್ದರು.
ಶಿಕ್ಷಕ ಜಗದೀಶ ಕೇಶವ ಮಡಿವಾಳ ಸ್ವಾಗತಿಸಿದರು. ಕಲಾ ಶಿಕ್ಷಕ ಶೇಖರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ದೈ. ಶಿ. ಶಿ ಶಶಿಕಾಂತ ವಂದಿಸಿದರು. ಪ್ರಾಥಮಿಕ ವಿಭಾಗದ ಬಾಲಕರ 6 ಬಾಲಕಿಯರ ತಂಡಗಳು ಹಾಗೂ ಪ್ರೌಢಶಾಲಾ ವಿಭಾಗದ ಬಾಲಕರ 7 ಹಾಗೂ ಬಾಲಕಿಯರ 7 ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಿದ್ದವು.
