ಮೂಡುಬಿದಿರೆ: ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ವಿವಿಧ ಪಂದ್ಯಾಟಗಳಲ್ಲಿ ಮಂಗಳೂರು ಗ್ರಾಮಾಂತರವನ್ನು ಪ್ರತಿನಿಧಿಸಿದ ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜು 12 ವಿಭಾಗದಲ್ಲಿ ಭಾಗವಹಿಸಿ 10 ವಿಭಾಗಗಳಲ್ಲಿ ಚಾಂಪಿಯನ್ ಆಗಿ ಮೂಡಿಬಂದಿದ್ದು, ದಕ್ಷಿಣ ಕನ್ನಡ.
10 ವಿಭಾಗಗಳಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯನ್ನು ರಾಜ್ಯಮಟ್ಟದಲ್ಲಿ ಪ್ರತಿನಿಧಿಸಲಿದೆ. 2 ವಿಭಾಗಗಳಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಬಾಲಕರ ವಿಭಾಗದಲ್ಲಿ ಕಬಡ್ಡಿ, ಖೋ ಖೋ, ಬಾಲ್‍ಬ್ಯಾಡಿಂಟನ್, ವಾಲಿಬಾಲ್, ಗುಡ್ಡಗಾಡು ಓಟದಲ್ಲಿ ಚಾಂಪಿಯನ್ ಹಾಗೂ ಬಾಲಕಿಯರ ವಿಭಾಗದಲ್ಲಿ ಕಬಡ್ಡಿ, ಖೋ ಖೋ, ಬಾಲ್‍ಬ್ಯಾಡಿಂಟನ್, ಬ್ಯಾಸ್ಕೆಟ್‍ಬಾಲ್, ಗುಡ್ಡಗಾಡು ಓಟದಲ್ಲಿ ಚಾಂಪಿಯನ್ ಆಗಿ ಮೂಡಿ ಬಂದಿದೆ. ಬಾಲಕಿಯರ ವಾಲಿಬಾಲ್, ಶಟ್ಲ್ ಬ್ಯಾಡ್ಮಿಂಟನ್ ದ್ವಿತೀಯ ಸ್ಥಾನ ಪಡೆಯಿತು.
ಆಳ್ವಾಸ್ ಕ್ರೀಡಾಪಟುಗಳ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

