ಬಂಟ್ವಾಳ: ಬಂಟ್ವಾಳ ತಾಲೂಕು ವಗ್ಗದಲ್ಲಿರುವ ಮೊರಾರ್ಜಿ ದೇಸಾಯಿ ಹಿಂದುಳಿದ ವರ್ಗಗಳ ವಸತಿ ಶಾಲೆಯ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿನಿಯರು ಕಬಡ್ಡಿಯಲ್ಲಿ ರಾಜ್ಯ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

morarji

ವೇಣೂರು ಸ.ಪ.ಪೂ.ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನಿಗಳಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಂಡದ ನಾಯಕಿ ಅರ್ಚನಾ ಅವರು ಸವ್ಯಸಾಚಿ ಆಟಗಾರ್ತಿ ಮತ್ತು ಭವಾನಿ ಉತ್ತಮ ಹಿಡಿತಗಾರ್ತಿ ವೈಯಕ್ತಿಕ ಪ್ರಶಸ್ತಿ ಗಳಿಸಿದ್ದಾರೆ. ತಂಡಕ್ಕೆ ದೈಹಿಕ ಶಿಕ್ಷಣ ಶಿಕ್ಷಕ ಆಸಿದ್ ಅವರು ತರಬೇತಿ ನೀಡಿದ್ದು, ಶಿಕ್ಷಕ ಮಂಜುನಾಥ ದಾಸ್ ಅವರು ವ್ಯವಸ್ಥಾಪಕರಾಗಿ ತಂಡವನ್ನು ಮುನ್ನಡೆಸಿದ್ದಾರೆ. ವಿಜೇತ ತಂಡಕ್ಕೆ ಪ್ರಾಂಶುಪಾಲ ಕೆ.ವಿ. ನಾಗರಾಜು ಮತ್ತು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಯಣ್ಣ ಅವರು ಅಭಿನಂದನೆ ಸಲ್ಲಿಸಿದ್ದಾರೆ.

By Suddi9

Leave a Reply

Your email address will not be published. Required fields are marked *