ವಿಟ್ಲ: ಶಟಲ್ ಬ್ಯಾಡ್ಮಿಂಟನ್ ಮತ್ತು ಈಜು ಸ್ಪರ್ದೆಗಳಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿಗಳಿಸಿದ ವಿಟ್ಲದ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ, ವಿಠಲ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುಚೇತನ್ ಜೈನ್ ಮತ್ತು ಮಮತಾ ಎಸ್ ಜೈನ್ ರವರ ಮಗಳಾದ ಹಸ್ತಾ ಎಸ್ ಜೈನ್ ರವರನ್ನು, ವಿಟ್ಲ ರೋಟರಿ ಕ್ಲಬ್ ಗೆ ಜಿಲ್ಲಾ ರಾಜ್ಯಪಾಲ ಡಾ| ಆರ್ ಎಸ್ ನಾಗಾರ್ಜುನ ರವರ ಅಧಿಕೃತ ಬೇಟಿ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

a2

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ವಸಂತ ಶೆಟ್ಟಿ, ಪೂರ್ವಾಧ್ಯಕ್ಷರಾದ ಭಾಸ್ಕರ ಶೆಟ್ಟಿ ಮತ್ತು ಡಿ ಬಿ ಅಬೂಬಕ್ಕರ್, ಕಾರ್ಯದರ್ಶಿ ಕಿರಣ್ ಕುಮಾರ್ ಬ್ರಹ್ಮಾವರ್, ಸಂತೋಷ್ ಶೆಟ್ಟಿ, ಜಯಕುಮಾರ್ ಮತ್ತು ಸಂಜೀವ ಪೂಜಾರಿ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *